ಭಾರತೀಯ ರೈಲ್ವೆ ಇಲಾಖೆಯು 2025ನೇ ಸಾಲಿನ ಬರೋಬರಿ 9,900 ಅಸಿಸ್ಟಂಟ್ ಲೋಕೋಪೈಲಟ್ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ.
ಹುದ್ದೆ ಹೆಸರು ಅಸಿಸ್ಟಂಟ್ ಲೋಕೋ ಪೈಲಟ್
ಹುದ್ದೆಗಳ ಸಂಖ್ಯೆ 9,900
ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗೆ ವಿದ್ಯಾರ್ಹತೆ
ಮೆಟ್ರಿಕ್ಯೂಲೇಷನ್ / ಎಸ್‌ಎಸ್‌ಎಲ್‌ಸಿ ಜತೆಗೆ ಐಟಿಐ ಅನ್ನು ಅಂಗೀಕೃತ ಸಂಸ್ಥೆಗಳಲ್ಲಿ ವಿವಿಧ ಟ್ರೇಡ್‌ಗಳಲ್ಲಿ ಪಡೆದು ಎನ್‌ಸಿವಿಟಿ / ಎಸ್‌ಸಿವಿಟಿ ಪ್ರಮಾಣ ಪತ್ರ ಪಡೆದಿರಬೇಕು.
ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗೆ ವಯಸ್ಸಿನ ಅರ್ಹತೆ
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗೆ ಅರ್ಜಿ ಶುಲ್ಕ ಮಾಹಿತಿ
ಜೆನೆರಲ್ ಕೆಟಗರಿ ಹಾಗೂ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಅಭ್ಯರ್ಥಿಗಳಿಗೆ ರೂ.500.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.250.
ಕರ್ನಾಟಕದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್‌ಸೈಟ್ ವಿಳಾಸ : www.rrbbnc.gov.in
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10-04-2025
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 09-05-2025