ಬೆಂಗಳೂರು: ಯುವ ಅಭ್ಯರ್ಥಿಗಳಿಗೆ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕಂದಾಯ ಇಲಾಖೆಯಡಿ ರಾಜ್ಯದ 22 ಜಿಲ್ಲೆಗಳಲ್ಲಿ ಖಾಲಿ ಇರುವ ಬರೋಬ್ಬರಿ 572 ಗ್ರಾಮ ಆಡಳಿತ ಅಧಿಕಾರಿಗಳ (VAO) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆಯು ಅನುಮೋದನೆ ನೀಡಿದೆ.
ಹುದ್ದೆಗಳ ಭರ್ತಿಗೆ ತಕ್ಷಣವೇ ಸರ್ಕಾರಕ್ಕೆ ಅಧಿಕೃತ ಪ್ರಸ್ತಾವನೆ ಸಲ್ಲಿಸುವಂತೆ 22 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ. ಇದರಿಂದಾಗಿ ಶೀಘ್ರದಲ್ಲೇ ಈ ಹುದ್ದೆಗಳಿಗೆ ಬೃಹತ್ ಅಧಿಸೂಚನೆ ಹೊರಬೀಳಲಿದೆ.

































