ಉಡುಪಿ ಜಿಲ್ಲೆಯಾದ್ಯಂತ ನಾಳೆ (ಮೇ 20) ಭಾರೀ ಮಳೆಯಾಗುವ ಸಂಭವವಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ರೆಡ್ ಅಲರ್ಟ್ ಘೋಷಣೆ ಆಗಿರುವ ಕಾರಣ ನಾಳೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಭಾರೀ ಸುಂಟರಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಸೋಮವಾರ ಇಡೀ ದಿನ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆ ಸುರಿದಿದೆ. ದಿಢೀರ್ ಸುರಿದ ಮಳೆಗೆ ಜನರು ಪರದಾಡಿದರು. ಉಡುಪಿ, ಮಣಿಪಾಲ, ಮಲ್ಪೆ, ಪರ್ಕಳ, ಇಂದ್ರಾಳಿ ಸಹಿತ ಉಡುಪಿ ತಾಲೂಕಿನಾದ್ಯಂತ ಮಳೆ ಸುರಿದಿದೆ.