ಬೆಂಗಳೂರು: ಅಕ್ರಮ ಅದಿರು ಸಾಗಾಟ ಪ್ರಕರಣ ಸಂಬಂಧ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಲೋಕಾಯುಕ್ತ SIT ದಾಖಲಿಸಿದ್ದ 2 ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ ಹಲವರನ್ನು ಕೈಬಿಟ್ಟು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಕೋರಿ ರೆಡ್ಡಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಜನಾರ್ದನ ರೆಡ್ಡಿ ಸೇರಿದಂತೆ ಇತರ ಆರೋಪಿಗಳನ್ನು ಪ್ರಕರಣದಿಂದ ಕೈಬಿಟ್ಟು ಮಹತ್ವದ ಆದೇಶ ಹೊರಡಿಸಿದೆ.






























