ಮುಂಬೈ : ಪ್ರಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನರಾಗಿದ್ದಾರೆ. ಪಶ್ಚಿಮ ಘಟ್ಟಗಳು ಹಾಗೂ ಪರಿಸರ ಸಂರಕ್ಷಣೆಗೆ ತಮ್ಮ ಇಡೀ ಜೀವನವನ್ನು ಅವರು ಮುಡಿಪಾಗಿಟ್ಟಿದ್ದರು.
ಅವರು ಪುಣೆಯಲ್ಲಿ ಕೊನೆಯುಸಿರೆಳೆದಿದ್ದು ಅವರಿಗೆ 83 ವರ್ಷ ವಯಸ್ಸಾಗಿತ್ತು. ಅವರು ಕೆಲವು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಐದು ದಶಕಗಳಿಗೂ ಹೆಚ್ಚು ಕಾಲ ಭಾರತದ ಪರಿಸರ ಚಿಂತನೆ, ಸಂರಕ್ಷಣಾ ನೀತಿಗಳನ್ನು ಆಳವಾಗಿ ರೂಪಿಸಿದ ಜೀವ ಇಂದು ನಮ್ಮೊಂದಿಗಿಲ್ಲ. ಮಾಧವ ಗಾಡ್ಗೀಳ್ ಅವರು 1983 ರಲ್ಲಿ ಸ್ಥಾಪನೆಯಾದ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್ಸಿ) ಪರಿಸರ ವಿಜ್ಞಾನ ಕೇಂದ್ರದ ಸ್ಥಾಪಕರಾಗಿದ್ದರು.

































