ನವದೆಹಲಿ: ದರ್ಶನ್ ಪವಿತ್ರ ಗೌಡ ಸೇರಿದಂತೆ ಇತರೇ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್ ದರ್ಶನ್ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.
ಈ ವೇಳೆ ಹೈಕೋರ್ಟ್ ವಿಸ್ತೃತ ಆದೇಶ ಪ್ರಕಟಿಸಿ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ ಆರೋಪಿಗಳ ವಾದವನ್ನು ಕೇಳಬೇಕಾಗುತ್ತದೆ ಎಂದು ಹೇಳಿ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ ಕೋರ್ಟ್ ವಿಚಾರಣೆಯನ್ನು ಮುಂದೂಡಿತು.
ದರ್ಶನ್ ಹಾಗೂ 7 ಆರೋಪಿಗಳ ಜಾಮೀನು ರದ್ದುಕೋರಿ ಸುಪ್ರೀಂಕೋರ್ಟ್‌ಗೆಪೊಲೀಸರು ಅರ್ಜಿ ಸಲ್ಲಿಸಿದ್ದರು. ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ಸರ್ಕಾರ ಬರೋಬ್ಬರಿ 1,492 ಪುಟಗಳ ಕಡತಗಳನ್ನು ಸಲ್ಲಿಕೆ ಮಾಡಿತ್ತು.