ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಸದಸ್ಯರಿಗೆ ಸುಪ್ರೀಂ ಕೋರ್ಟ್ 2 ತಿಂಗಳು ರಿಲೀಫ್ ನೀಡಿದೆ.
ದರ್ಶನ್, ಪವಿತ್ರಾ ಸೇರಿದಂತೆ 17 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ದೊರೆತಿತ್ತು. ವಿಚಾರಣೆ ವೇಳೆ ಕೋರ್ಟ್ಗೆ ಹಾಜರಿ ಹಾಕಬೇಕು ಎಂಬುದು ಕೋರ್ಟ್‌ನ ಷರತ್ತುಗಳಲ್ಲಿ ಒಂದು. ಈ ಷರತ್ತನ್ನು ಅವರು ಪಾಲಿಸುತ್ತಾ ಇದ್ದಾರೆ. ಈ ಮಧ್ಯೆ ಜಾಮೀನು ಮಂಜೂರು ಮಾಡಿರುವ ಆದೇಶ ಪ್ರಶ್ನಿಸಿ, ದರ್ಶನ್ ಅವರ ಜಾಮೀನು ರದ್ದು ಮಾಡಬೇಕು ಎಂದು ಬೆಂಗಳೂರು ನಗರ ಪೊಲೀಸರು ಸುಪ್ರೀಂಕೋರ್ಟ್ಗೆ ಮನವಿ ಮಾಡಿದ್ದರು.
ಪೊಲೀಸರು ಸಲ್ಲಿಸಿರುವ ಮೇಲ್ಮನವಿಯ ಅರ್ಜಿಯ ವಿಚಾರಣೆ ಬುಧವಾರ ಸುಪ್ರೀಂ ಕೋರ್ಟ್‌ನ ಜೆ.ಬಿ. ಪಾರ್ದೀವಾಲಾ ಮತ್ತು ಆರ್. ಮಹಾದೇವನ್ ಪೀಠದಲ್ಲಿ ನಡೆಯಿತು. ಈ ವೇಳೆ ಸುಪ್ರೀಂಕೋರ್ಟ್ಗೆ ಬೇಸಿಗೆ ರಜೆ ಇದೆ. ಜುಲೈ 14ಕ್ಕೆ ಬೇಸಿಗೆ ರಜೆ ಅಂತ್ಯವಾಗಲಿದೆ. ಇದಾದ ಬಳಿಕ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಹೀಗಾಗಿ ಅಲ್ಲಿಯವರೆಗೆ ದರ್ಶನ್ ಮತ್ತು ಇತರ ಆರೋಪಿಗಳಿಗೆ ರಿಲೀಫ್ ಸಿಕ್ಕಂತಾಗಿದೆ. ವಿಚಾರಣೆ ದಿನಾಂಕ ಮುಂದಿನ ದಿನಗಳಲ್ಲಿ ಪ್ರಕಟವಾಗಲಿದೆ.
2024ರ ಡಿ.13ರಂದು ಹೈಕೋರ್ಟ್ ಏಕಸದಸ್ಯ ಪೀಠ ದರ್ಶನ್, ಪವಿತ್ರಗೌಡ ಸೇರಿದಂತೆ ಏಳು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.