ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆಯನ್ನು 57ನೇ ಸಿಸಿಎಚ್ ನ್ಯಾಯಾಲಯವು ಮುಂದೂಡಿಕೆ ಮಾಡಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಎಲ್ಲಾ ಆರೋಪಿಗಳ ಹಾಜರಾತಿಗೆ ಕೋರ್ಟ್ ಆದೇಶ ನೀಡಿತ್ತು.
ಹೀಗಾಗಿ ಇಂದು ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲ 17 ಆರೋಪಿಗಳು ಇಂದು ಕೋರ್ಟ್ಗೆ ಹಾಜರಾಗಿದ್ದರು. ವಾದ, ಪ್ರತಿವಾದ ಆಲಿಸಿದ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25 ಮುಂದೂರಿಕೆ ಮಾಡಿದ ಆದೇಶ ನೀಡಿದೆ.