ದೆಹಲಿ: ಗೋಮೂತ್ರವು ಎಲ್ಲಾ ರೋಗಗಳನ್ನು ಗುಣಪಡಿಸುತ್ತದೆ ಎಂದು ಹೇಳಲಾಗುತ್ತದೆ. ಆದರೆ, ದೇಶದ ಅಗ್ರಮಾನ್ಯ ಪ್ರಾಣಿ ಸಂಶೋಧನಾ ಸಂಸ್ಥೆಯಾದ ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯು ಗೋಮೂತ್ರ ಅತ್ಯಂತ ಅಪಾಯಕಾರಿ ಎಂಬುದನ್ನು ಹೇಳಿದೆ.
ಐವಿಆರ್‌ಐ ನಡೆಸಿದ ಸಂಶೋಧನೆಯು ಗೋಮೂತ್ರ ಅತ್ಯಂತ ಅಪಾಯಕಾರಿ ಎಂಬುದನ್ನು ಬಹಿರಂಗಪಡಿಸಿದ್ದು, ಸಂಸ್ಥೆಯ ಭೋಜ್ ರಾಜ್ ಸಿಂಗ್ ನೇತೃತ್ವದಲ್ಲಿ ಮೂವರು ಪಿಎಚ್‌ಡಿ ವಿದ್ಯಾರ್ಥಿಗಳು ನಡೆಸಿದ ಅಧ್ಯಯನವು ಹಸು ಮತ್ತು ಗೂಳಿ ಮೂತ್ರದ ಮಾದರಿಗಳಲ್ಲಿ ಕನಿಷ್ಠ 14 ರೀತಿಯ ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಹೊಂದಿದೆ ಎಂದು ಕಂಡುಹಿಡಿದಿದ್ದಾರಂತೆ.!