ತುಮಕೂರು: ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸರ್ಕಾರದ ಸೌಲಭ್ಯ ಪಡೆಯುವ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ ಜಾರಿಗೆ ತರಲು ಮಸೂದೆ ರೂಪಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ರಾಜಣ್ಣ 75ನೇ ಜನ್ಮದಿನಾಚರಣೆ ಅಂಗವಾಗಿ ಹೊರ ತರಲಾಗಿದ್ದ ‘ಸಹಕಾರ ಸಾರ್ವಭೌಮ’ ಕೃತಿಗೆ ಬರಹಗಳನ್ನು ನೀಡಿದ ಲೇಖಕರಿಗೆ ನಗರದ ಖಾಸಗಿ ರೆಸಾರ್ಟ್ ನಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸೌಲಭ್ಯ ಪಡೆಯುವ ಸಹಕಾರ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ ತರುವ ಮಸೂದೆ ರೂಪಿಸಲಾಗಿದ್ದು, ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಿ ಕಾಯ್ದೆ ಜಾರಿಗೆ ಬದ್ಧರಾಗಿದ್ದೇವೆ. ಅಸಹಾಯಕರು, ಅಶಕ್ತರಿಗೆ ಸಹಾಯ ಮಾಡುವ ಶಕ್ತಿ ಮತ್ತು ಹೆಚ್ಚಿನ ಅವಕಾಶ ಸಹಕಾರಿಗಳಿಗೆ ಇರುತ್ತದೆ ಎಂದು ಹೇಳಿದ್ದಾರೆ.