ಬೆಂಗಳೂರು : ಇದೀಗ ‘ಕಾಂತಾರ’ ಸಿನಿಮಾದಿಂದ ರಿಷಬ್ ಶೆಟ್ಟಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ‘ಕಾಂತಾರ’ ಸಿನಿಮಾ ರಿಷಬ್ ಶೆಟ್ಟಿ ಅವರಿಗೆ ದೊಡ್ಡ ಮಟ್ಟದ ಗೌರವ, ಐಶ್ವರ್ಯ ಮತ್ತು ಅವಕಾಶಗಳನ್ನು ತಂದುಕೊಂಡಿದೆ.
ರಿಷಬ್ ಶೆಟ್ಟಿ ಪ್ರಸ್ತುತ ‘ಕಾಂತಾರ ಚಾಪ್ಟರ್ 1’ ಸಿನಿಮಾದ ನಿರ್ದೇಶನ ಮತ್ತು ನಟನೆಯಲ್ಲಿ ತೊಡಗಿಕೊಂಡಿದ್ದಾರೆ. ಪರಭಾಷೆಗಳಿಂದಲೂ ರಿಷಬ್ ಶೆಟ್ಟಿ ಅವರಿಗೆ ಸಿನಿಮಾ ಅವಕಾಶಗಳು ಅರಸಿ ಬರುತ್ತಿವೆ.ತೆಲುಗಿನ ‘ಜೈ ಹನುಮಾನ್’ ಪ್ಯಾನ್ ಇಂಡಿಯಾ ಸಿನಿಮಾನಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ. ಅದರ ಜೊತೆಗೆ ಬಾಲಿವುಡ್ ಸಿನಿಮಾದ ಅವಕಾಶವೂ ರಿಷಬ್ಗೆ ಬಂದಿದ್ದು, ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ ಆಗಿದೆ.
ತೆಲುಗಿನಲ್ಲಿ ಫ್ಯಾಂಟಸಿ ಸಿನಿಮಾ ಆಗಿರುವ ‘ಜೈ ಹನುಮಾನ್’ನಲ್ಲಿ ಆಂಜನೇಯನ ಪಾತ್ರದಲ್ಲಿ ನಟಿಸುತ್ತಿರುವ ರಿಷಬ್ ಶೆಟ್ಟಿ, ಹಿಂದಿ ಸಿನಿಮಾದಲ್ಲಿ ಛತ್ರಪತಿ ಶಿವಾಜಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ದಿ ಪ್ರೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಶಿವಾಜಿ ಮಹಾರಾಜರ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಒಂದು ಪೋಸ್ಟರ್ ಈ ಹಿಂದೆಯೇ ಬಿಡುಗಡೆ ಆಗಿತ್ತು. ಇದೀಗ ಮತ್ತೊಂದು ಪೋಸ್ಟರ್ ಬಿಡುಗಡೆ ಆಗಿದೆ.