ಪಾಟ್ನಾ: ಬಿಹಾರ ಚುನಾವಣೆಯಲ್ಲಿ ಆರ್‌ಜೆಡಿಯು ಮುಸ್ಲಿಂ ಸಮುದಾಯವನ್ನು ಮತಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ ಎಂದು ಜನ್ ಸುರಾಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಆರೋಪಿಸಿದ್ದಾರೆ. ರಾಜ್ಯದಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ವಿಧಾನಸಭಾ ಸ್ಥಾನಗಳನ್ನು ಹಂಚಿಕೆ ಮಾಡುವಂತೆ ಆರ್‌ಜೆಡಿಗೆ ಸವಾಲು ಹಾಕಿರುವ ಅವರು, ಸಮುದಾಯಕ್ಕೆ ಕನಿಷ್ಠ 40 ವಿಧಾನಸಭಾ ಸ್ಥಾನಗಳನ್ನು ನೀಡಬೇಕು ಎಂದು ಹೇಳಿದ್ದಾರೆ. ಆರ್‌ಜೆಡಿ ಮುಸ್ಲಿಮರ ಕಲ್ಯಾಣಕ್ಕಾಗಿ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಸಮುದಾಯಕ್ಕೆ ಚುನಾವಣೆಯಲ್ಲಿ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಕಿಶೋರ್ ಟೀಕಿಸಿದರು.
40 ಮಹಿಳೆಯರು ಸೇರಿದಂತೆ 243 ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಯೋಜನೆಯೊಂದಿಗೆ 2025ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಜನ್ ಸುರಾಜ್ ಗೆಲುವು ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜನ್ ಸುರಾಜ್ ಪಕ್ಷ ಚುನಾವಣೆಗೆ ಸ್ಪರ್ಧಿಸಿದರೆ ಮುಸ್ಲಿಂ ಮತಗಳು ವಿಭಜನೆಯಾಗುತ್ತವೆ ಎಂದು ಹೇಳಿದ್ದಾರೆ. ನೀವು ಎಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೀರೋ ಅಲ್ಲಿ ನಾವು ಹಿಂದೂ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.