ಬೆಂಗಳೂರು : ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಿಗೆ ಇದೀಗ ವಿಧಾನಸೌಧದ ಮುಂಭಾಗ ರಾಜ್ಯ ಸರ್ಕಾರ ಸನ್ಮಾನಿಸಿದೆ
ವಿಧಾನಸೌಧದ ಮುಂದೆ ಆರ್ ಸಿಬಿ ಆಟಗಾರರು ನಾಡಗೀತೆಗೆ ಗೌರವ ಸಲ್ಲಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಇದ್ದರು.
ಬೆಂಗಳೂರಿಗೆ ಬಂದಿಳಿದ ಆರ್ ಸಿಬಿ ಆಟಗಾರರನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದು, ಆರ್ ಸಿಬಿ ಆಟಗಾರರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿದ್ದಾರೆ.
 
				 
         
         
         
															 
                     
                     
                     
                     
                    


































 
    
    
        