ಬೆಂಗಳೂರು: ಭಾರತ ದೇಶಾದ್ಯಂತ ಅನೇಕ ಕಡೆಗಳಲ್ಲಿ ನಾಳೆ ಮಂಗಳವಾರ ಮೇ 16ರಂದು ‘ರೋಜ್‌ಗಾರ್ ಮೇಳ’ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಬಹುನಿರೀಕ್ಷೆಯ ಕಾರ್ಯಕ್ರಮಕ್ಕೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ.
ದೇಶಾದ್ಯಂತ 45 ಕಡೆಗಳಲ್ಲಿ ಏಕಕಾಲಕ್ಕೆ ನಡೆಯಲಿರುವ ಈ ಮೇಳವು ಬೆಳಗ್ಗೆ 10.30ಗಂಟೆಗೆ ಆರಂಭವಾಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೇಳದಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಬಳಿಕ ನೇಮಕಾತಿ ಕುರಿತು ಮಾತನಾಡಲಿದ್ದಾರೆ ಎಂದು ಕೇಂದ್ರದ ಮೂಲಗಳು ತಿಳಿಸಿವೆ. ದೇಶದಲ್ಲಿ ಅಗತ್ಯ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆ ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳವು ಕೇಂದ್ರದ ಪಾಲಿಗೆ ಮಹತ್ವದ ಹೆಜ್ಜೆಯಾಗಿದೆ. ದೇಶಾದ್ಯಂತ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು, ಕೇಂದ್ರಾಳಿತ ಪ್ರದೇಶಗಳಲ್ಲಿ ನೇಮಕಾತಿಗಳು ನಡೆಯುತ್ತಿವೆ.
ದೇಶಾದ್ಯಂತ ಹೊಸ ನೇಮಕಾತಿಗಳು ದೇಶಾದ್ಯಂತ ಆಯ್ಕೆಯಾದ ಹೊಸ ನೇಮಕಾತಿಗಳು, ಗ್ರಾಮೀಣ ಡಾಕ್ ಸೇವಕ್, ಪೋಸ್ಟ್‌ಗಳ ಇನ್ಸ್‌ಪೆಕ್ಟರ್, ಕಮರ್ಷಿಯಲ್-ಕಮ್-ಟಿಕೆಟ್ ಕ್ಲರ್ಕ್, ಜೂನಿಯರ್ ಕ್ಲರ್ಕ್-ಕಮ್-ಟೈಪಿಸ್ಟ್, ಜೂನಿಯರ್ ಅಕೌಂಟ್ಸ್ ಕ್ಲರ್ಕ್, ಟ್ರ್ಯಾಕ್ ಮೇಂಟೇನರ್, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ಮುಂತಾದ ವಿವಿಧ ಹುದ್ದೆಗಳು/ಪೋಸ್ಟ್‌ಗಳಿಗೆ ನೇಮಕವಾಗಲಿದೆ. ವಿಭಾಗೀಯ ಲೆಕ್ಕಾಧಿಕಾರಿ, ಲೆಕ್ಕಪರಿಶೋಧಕ, ಕಾನ್‌ಸ್ಟೆಬಲ್, ಹೆಡ್ ಕಾನ್‌ಸ್ಟೆಬಲ್, ಸಹಾಯಕ ಕಮಾಂಡೆಂಟ್, ಪ್ರಾಂಶುಪಾಲರು, ಇಲಾಖೆಗಳಲ್ಲಿನ ಗುಮಾಸ್ತ, ಉಪವಿಭಾಗಾಧಿಕಾರಿ, ನರ್ಸಿಂಗ್ ಅಧಿಕಾರಿಗಳು, ಸಹಾಯಕ ಭದ್ರತಾ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿ, ಸಹಾಯಕ ಲೆಕ್ಕಪರಿಶೋಧಕ ಅಧಿಕಾರಿ, ಸಹಾಯಕ ಲೆಕ್ಕಪರಿಶೋಧಕ ಅಧಿಕಾರಿ, ತೆರಿಗೆ ಸಹಾಯಕರು, ಸಹಾಯಕ ಜಾರಿ ಅಧಿಕಾರಿ, ಇನ್‌ಸ್ಪೆಕ್ಟರ್‌ಗಳು, ವಿಭಾಗೀಯ ಲೆಕ್ಕಾಧಿಕಾರಿ, ಲೆಕ್ಕಪರಿಶೋಧಕ, ಕಾನ್‌ಸ್ಟೆಬಲ್, ಹೆಡ್ ಕಾನ್‌ಸ್ಟೆಬಲ್, ಸಹಾಯಕ ಕಮಾಂಡೆಂಟ್, ಪ್ರಾಂಶುಪಾಲರು, ಸಹಾಯಕ ಕುಲಸಚಿವರು, ಸಹಾಯಕ ಪ್ರಾಧ್ಯಾಪಕರು ಮತ್ತು ತರಬೇತಿ ಪಡೆದವರು ಪದವೀಧರ ಶಿಕ್ಷಕರು ಇನ್ನಿತರರು ನೇಮಕಗೊಳ್ಳುತ್ತಾರೆ.
ಬಿಜೆಪಿ ಸರ್ಕಾರ ವಾರ್ಷಿಕವಾಗಿ ಎರಡು ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳಿತ್ತು. ರೋಜ್‌ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ನೀಡುತ್ತದೆ ಎಂಬ ನಿರೀಕ್ಷೆ ಮೇಳದಿಂದ ಹೆಚ್ಚಾಗುತ್ತಿದೆ.
ವಿವಿಧ ಇಲಾಖೆಗಳಿಗೆ ಹೊಸದಾಗಿ ಸೇರ್ಪಡೆಗೊಂಡವರು ಕರ್ಮಯೋಗಿ ಪ್ರಾರಂಭ್ ಮೂಲಕ ತರಬೇತಿ ಪಡೆಯಲು ಅವಕಾಶ ಪಡೆಯುತ್ತಾರೆ. ಇದು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡವರಿಗೆ ಆನ್‌ಲೈನ್ ಓರಿಯಂಟೇಶನ್ ಕೋರ್ಸ್ ಆಗಿರುತ್ತದೆ ಎಂದು ಕೇಂದ್ರದ ಮೂಲಗಳು ತಿಳಿಸಿವೆ.