ಬೀದರ್: RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ ಮತ್ತೋರ್ವ ಸರ್ಕಾರಿ ಅಧಿಕಾರಿಯನ್ನು ಅಮಾನತು ಗೊಳಿಸಲಾಗಿದೆ.
ಸೆ. 13 ರಂದು ಬಸವಕಲ್ಯಾಣದಲ್ಲಿ ನಡೆದ RSS ಪಥ ಸಂಚಲನದಲ್ಲಿ ಪ್ರಮೋದ್ ಭಾಗಿಯಾಗಿದ್ದರು. ಇವರು ಬೀದರ್‌ನ ಬಸವಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಅಡುಗೆ ಸಹಾಯಕರಾಗಿದ್ದರು.
ಇದೀಗ ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ. ಸರ್ಕಾರದಿಂದ ವೇತನ ಪಡೆದು ಯಾವುದೇ ಸಂಘ ಸಂಸ್ಥೆಯಲ್ಲಿ ಭಾಗಿಯಾಗಬಾರದೆಂದು ಪ್ರತಿಯಲ್ಲಿ ಉಲ್ಲೇಖಿಸಿ ತಾಲೂಕಾಧಿಕಾರಿ ಆದೇಶ ಹೊರಡಿಸಿದ್ದಾರೆ.