ನವದೆಹಲಿ: ಕೋಮು ಸಾಮರಸ್ಯ ಸ್ಥಾಪನೆಯ ಉದ್ದೇಶದಿಂದ ಮುಸ್ಲಿಂ ಮುಖಂಡರುಗಳ ಜೊತೆಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಭೆ ನಡೆಸಿದ್ದಾರೆ.
ದೀರ್ಘಕಾಲದಿಂದ ಹಿಂದೂಗಳು ಮತ್ತು ಮುಸಲ್ಮಾನರ ನಡುವೆ ಅಪನಂಬಿಕೆ ಮನೆ ಮಾಡಿದ್ದು, ಅದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಮುಸ್ಲಿಂ ಧರ್ಮ ಗುರುಗಳ ಜೊತೆಗೆ ಸಭೆ ನಡೆಸಲಾಗಿದೆ.
ಸುಮಾರು ಅರವತ್ತಕ್ಕೂ ಹೆಚ್ಚು ಮುಸ್ಲಿಂ ಮುಖಂಡರು ಈ ಸಭೆಯಲ್ಲಿ ಪಾಲ್ಗೊಂಡಿದ್ದು, ಮೂರು ಗಂಟೆಗಳ ಕಾಲ ಈ ಸಭೆ ನಡೆದಿದೆ. ಇದನ್ನು ಸಕಾರಾತ್ಮಕ ಸಭೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಕರೆದಿದ್ದು, ದೇಶದ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಒಟ್ಟಾಗಿ ಎಲ್ಲರೂ ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದು ಈ ಸಭೆಯ ಮುಖ್ಯ ಉದ್ದೇಶ ಎಂದು ಹೇಳಿದೆ.