ನವದೆಹಲಿ: ಭಾರತದ ತಾಲಿಬಾನ್ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್.ಎಸ್.ಎಸ್.) ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆ ನೀಡಿದ್ದು ವಿವಾದಕ್ಕೀಡಾಗಿದೆ.
ಸುದ್ದಿ ಸಂಸ್ಥೆಯೊಂದರ ಜೊತೆ ಮಾತನಾಡಿದ ಹರಿಪ್ರಸಾದ್ ಅವರು, ಪ್ರಧಾನಿ ಮೋದಿ ಇತ್ತೀಚೆಗೆ ಆರ್.ಎಸ್.ಎಸ್. ಹೊಗಳಿದ್ದನ್ನು ಟೀಕಿಸುವ ಭರದಲ್ಲಿ ಆರ್.ಎಸ್.ಎಸ್. ಬಗ್ಗೆ ಹೇಳಿಕೆ ನೀಡಿದ್ದು, ಆರ್.ಎಸ್.ಎಸ್. ಭಾರತದ ತಾಲಿಬಾನ್ ಎಂದು ಹೇಳಿದ್ದಾರೆ.
ಉಗ್ರರ ಮೇಲೆ ಕಾಂಗ್ರೆಸ್ ಗೆ ಪ್ರೀತಿ ಎನ್ನುವ ಆರೋಪಕ್ಕೆ ಹರಿಹಾಯ್ದ ಅವರು, ದೇಶದಲ್ಲಿ ಶಾಂತಿ ಕದಡಲು ಆರ್.ಎಸ್.ಎಸ್. ಪ್ರಯತ್ನಿಸುತ್ತಿದೆ. ಅವರು ಭಾರತದ ತಾಲಿಬಾನಿಗಳು. ಅಂತವರನ್ನು ಮೋದಿ ಕೆಂಪು ಕೋಟೆಯಲ್ಲಿ ಹೊಗಳುತ್ತಾರೆ ಎಂದು ಹೇಳಿದ್ದಾರೆ.
ಅವರ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕಾಂಗ್ರೆಸ್ ರಾಷ್ಟ್ರೀಯವಾದಿ ಸಂಘಟನೆಯನ್ನು ನಿಷೇಧಿಸುತ್ತದೆ. ಮೂಲಭೂತಾವಾದಿ ಸಂಘಟನೆಗಳಾದ ನಿಷೇಧಿತ ಪಿಎಫ್ಐ, ಸಿಮಿ ಸಂಘಟನೆಗಳ ಮೇಲೆ ಹೆಚ್ಚಿನ ಪ್ರೀತಿ ತೋರಿಸುತ್ತದೆ ಎಂದು ಹೇಳಿದೆ.