ಬೆಂಗಳೂರು : ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್ ನೋಟ್‍ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದ ಅವರು, ಸಚಿನ್ ಡೆತ್‍ನೋಟ್‍ನಲ್ಲಿ ಪ್ರಿಯಾಂಕ್ ಖರ್ಗೆಯವರ ಹೆಸರೂ ಇದೆ. ಅವರಿಗೆ ಗೌರವ, ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಡಲಿ ಎಂದು ತಾಕೀತು ಮಾಡಿದರು.
ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ.4ರಂದು ನಾನು ಹಾಗೂ ವಿಜಯೇಂದ್ರ ಸೇರಿದಂತೆ ನಮ್ಮ ಪಕ್ಷದ ಎಲ್ಲಾ ಮುಖಂಡರು ಕಲಬುರಗಿಯಲ್ಲಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದ್ದಾರೆ.