ನವದೆಹಲಿ : ಎಆರ್ ರೆಹಮಾನ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಪತ್ನಿ ಸೈರಾ ಬಾನು ಪತಿಯಿಂದ ವಿಚ್ಛೇದನ ಪಡೆದು ಬೇರ್ಪಡುವುದಾಗಿ ಘೋಷಿಸಿದ್ದಾರೆ. ವಂದನಾ ಶಾ ಮತ್ತು ಅಸೋಸಿಯೇಟ್ಸ್ ದಂಪತಿಗಳ ಪ್ರತ್ಯೇಕತೆಯ ನಿರ್ಧಾರದ ಬಗ್ಗೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು 29 ವರ್ಷಗಳ ದಾಂಪತ್ಯಕ್ಕೆ ಇಬ್ಬರು ತೆರೆ ಎಳೆದಿದ್ದಾರೆ.
ಮದುವೆಯಾದ ಹಲವು ವರ್ಷಗಳ ನಂತರ ಸೈರಾ ಅವರು ತಮ್ಮ ಪತಿ ಎಆರ್ ರೆಹಮಾನ್ ನಿಂದ ಬೇರ್ಪಡುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಒತ್ತಡ ಮತ್ತು ತೊಂದರೆಗಳು ತಮ್ಮ ನಡುವೆ ಸರಿಪಡಿಸಲಾಗದ ಅಂತರ ಸೃಷ್ಟಿಸಿವೆ. ಈ ಸವಾಲಿನ ಸಮಯದಲ್ಲಿ ಸಾರ್ವಜನಿಕರಿಂದ ಗೌಪ್ಯತೆ ಹಾಗೂ ನಿರ್ಧಾರ ಗೌರವಿಸಲು ಮನವಿ ಮಾಡಿದ್ದೇನೆ ಎಂದು ಸೈರಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ವರದಿ ಆಗಿದೆ.
ಎ.ಆರ್ ರೆಹಮಾನ್ 1995 ರಲ್ಲಿ ಸೈರಾ ಅವರನ್ನು ಅರೇಂಜ್ಡ್ ಮ್ಯಾರೇಜ್ ಮಾಡಿಕೊಂಡಿದ್ರ. ಬಾಲಿವುಡ್ನ ಬಹುಬೇಡಿಕೆ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರ ಹಾಡುಗಳಿಗೆ ತಲೆದೂಗದವರೇ ಇಲ್ಲ ಎನ್ನಬಹುದು. 7 ಬಾರಿ ನ್ಯಾಷನಲ್ ಅವಾರ್ಡ್ ಗೆದ್ದ ಭಾರತದ ಏಕೈಕ ಮ್ಯೂಸಿಕ್ ಡೈರೆಕ್ಟರ್ ಆಗಿದ್ದಾರೆ. 1992ರಲ್ಲಿ ಮಣಿರತ್ನಂ ಅವರ ರೋಜಾ ಸಿನಿಮಾ ಮೂಲಕ ತಮಿಳು ಚಿತ್ರರಂಗಕ್ಕೆ ಸಂಗೀತ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು.
ಅವರು ಮೊದಲ ಸಿನಿಮಾದ ಮೂಲಕವೇ ರೋಜಾಗಾಗಿ ಮೊದಲ ನ್ಯಾಷನಲ್ ಅವಾರ್ಡ್ ಗಳಿಸಿದರು. ಗೋಲ್ಡನ್ ಗ್ಲೋಬ್ಸ್, ಕ್ರಿಟಿಕ್ ಚಾಯ್ಸ್ ಮೂವಿ ಅವಾರ್ಡ್ಸ್ ಹಾಗೂ ಆಸ್ಕರ್ ಕೂಡಾ ಸೇರಿದೆ. ಸ್ಲಮ್ ಡಾಗ್ ಮಿಲಿಯನೇರ್ಗಾಗಿ ಅವರು ಆಸ್ಕರ್ ಪಡೆದರು.