ಲಕ್ನೋ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಭಾನುವಾರ “ಸನಾತನ ಧರ್ಮ” ಭಾರತದ “ರಾಷ್ಟ್ರೀಯ ಧರ್ಮ” ಎಂದು ಹೇಳಿದ್ದಾರೆ. ‘ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭವು ಯಾವುದೇ ಒಂದು ಜಾತಿ ಅಥವಾ ಧರ್ಮಕ್ಕೆ ಮೀಸಲಾಗಿಲ್ಲ. ಸನಾತನ ಧರ್ಮವು ಭಾರತದ ರಾಷ್ಟ್ರೀಯ ಧರ್ಮವಾಗಿದೆ. ಅದು ಮಾನವೀಯತೆಯ ಧರ್ಮ. ಪೂಜಾ ಪ್ರಕ್ರಿಯೆಯು ವಿಭಿನ್ನವಾಗಿರಬಹುದು. ಆದರೆ ಧರ್ಮವು ಒಂದೇ ಮತ್ತು ಆ ಧರ್ಮವು ಸನಾತನ ಧರ್ಮವಾಗಿದೆ.
ಕುಂಭವು ಆ ಸನಾತನ ಧರ್ಮದ ಪ್ರತಿನಿಧಿಯಾಗಿದೆ” ಎಂದು ಸಿಎಂ ಯೋಗಿ ಆದಿತ್ಯನಾಥ್ ಅವರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಗಂಗಾ, ಯಮುನಾ ಮತ್ತು ಒಮ್ಮೆ ಸರಸ್ವತಿಯ ಸಂಗಮವಾದ ತ್ರಿವೇಣಿ ಸಂಗಮದಲ್ಲಿ ಸುಮಾರು ಆರು ಕೋಟಿ ಭಕ್ತರು ಪವಿತ್ರ ಸ್ನಾನ ಮಾಡಿದರು ಎಂದು ಯೋಗಿ ಆದಿತ್ಯನಾಥ್ ಹೇಳಿದರು.