ಬೆಳಗಾವಿ : ಬೆಳಗಾವಿ ಜಿಲ್ಲೆಯ ಗೋಕಾಕ್ ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಪೊಲೀಸರ ಎದುರೇ ಗಾಳಿಯಲ್ಲಿ ಗುಂಡು ಹಾರಿಸಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಮೊಂಡಾಟ ಮೆರೆದಿದ್ದಾರೆ.
ಸಾವಿರಾರು ಜನರು ಸೇರಿದ್ದ ಜಾತ್ರೆಯಲ್ಲಿ ಸಂತೋಷ್ ಮೊಂಡಾಟ ಮೆರೆದಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ. ಘಟನೆ ಸಂಬಂಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದಿದೆ .ಗೋಕಾಕ್ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.!