ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿದ್ದ ಎಸ್ಬಿಐ ಮಹಿಳಾ ಮ್ಯಾನೇಜರ್ ನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕನ್ನಡಿಗರ ಹೋರಾಟಕ್ಕೆ ಹೆದರಿ ರಾತ್ರೋರಾತ್ರಿ ಮ್ಯಾನೇಜರ್ನನ್ನು ಟ್ರಾನ್ಸ್ಫರ್ ಮಾಡಲಾಗಿದೆ. ಮಹಿಳಾ ಮ್ಯಾನೇಜರ್ನನ್ನು ಹೊರ ರಾಜ್ಯಕ್ಕೆ ವರ್ಗಾವಣೆಗೊಳಿಸುವಂತೆ ಆದೇಶ ನೀಡಲಾಗಿದೆ ಎಂದು ಎಸ್ಬಿಐ ಮೂಲಗಳು ತಿಳಿಸಿವೆ.
ಗ್ರಾಹಕರೊಬ್ಬರು ಕೆಲಸದ ನಿಮಿತ್ತ ಬೆಂಗಳೂರು ಹೊರವಲಯದ ಚಂದಾಪುರ ಎಸ್ಬಿಐ ಬ್ಯಾಂಕ್ಗೆ ಹೋದಾಗ ಕನ್ನಡ ಮಾತನಾಡುವಂತೆ ಮಹಿಳಾ ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದ್ದಾರೆ. ಆದರೆ ಕನ್ನಡ ಮಾತನಾಡಲು ಒಪ್ಪದ ಮಹಿಳಾ ಮ್ಯಾನೇಜರ್ ಗ್ರಾಹಕನಿಗೆ ಹಿಂದಿಯಲ್ಲಿ ಮಾತನಾಡುವಂತೆ ಅವಾಜ್ ಹಾಕಿದ್ದು, ಇದು ಭಾರತ.. ಬರೀ ಕರ್ನಾಟಕ ಮಾತ್ರ ಅಲ್ಲ. ನಾನು ಯಾವತ್ತೂ ಕನ್ನಡವನ್ನೇ ಮಾತಾಡಲ್ಲ. ಏನೇ ಆದರೂ ಅಂತ ಹೇಳುವ ಮೂಲಕ ಕನ್ನಡಿಗರನ್ನು ಕೆರಳಿಸಿದ್ದರು.
ಬ್ಯಾಂಕ್ ಮ್ಯಾನೇಜರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಎಸ್ಬಿಐ ಮಹಿಳಾ ಮ್ಯಾನೇಜರ್ನನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿದೆ.
ಮ್ಯಾನೇಜರ್ ಉದ್ದಟತನ ವಿರೋಧಿಸಿ ಇಂದು ಕನ್ನಡ ಪರ ಸಂಘಟನೆಗಳು ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿ ಮ್ಯಾನೇಜರ್ ವರ್ಗಾವಣೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದವು.