ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ವಿಶ್ವವಿದ್ಯಾನಿಲಯಗಳಲ್ಲಿ ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಫೇಲೋಶಿಪ್ ಅಥವಾ ವಿದ್ಯಾರ್ಥಿವೇತನಕ್ಕೆ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇದೇ ಜುಲೈ 13 ರಿಂದ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಹ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಸಮುದಾಯದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಲು ಇಲಾಖೆ ವೆಬ್ ಸೈಟ್ dom.karkataka.gov.in ನಲ್ಲಿ ಪರಿಶೀಲಿಸಿ ಹೆಚ್ಚಿನ ಮಾಹಿತಿಯನ್ನು ಪಡೆದು, ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಜಿಲ್ಲಾ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಅಥವಾ ದೂರವಾಣಿ ಸಂ: 08192-250022, 080192-250066 ಗೆ ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.