ಬೆಂಗಳೂರು: ಹೌದು ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ಸಚಿವರ ನಡುವೆ ವಾಕ್ ಸಮರ ನಡೆದಿರುವುದಾಗಿ ತಿಳಿದು ಬಂದಿದೆ. ಎಸ್ ಸಿ ಎಸ್ ಪಿ, ಟಿಎಸ್ ಪಿ ಹಣ ನೀಡದ ವಿಚಾರವಾಗಿ ಸಚಿವ ಹೆಚ್.ಸಿ ಮಹದೇವಪ್ಪ ಹಾಗೂ ಕೆಜೆ ಜಾರ್ಜ್ ನಡುವೆ ಕೂಗಾಡಿದಂತ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಡೆಯಿತು. ಈ ಸಭೆಯಲ್ಲಿ SCSP, TSP ಹಣ ನೀಡದ ವಿಚಾರವಾಗಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಕೂಗಾಡಿದ್ದಾಗಿ ತಿಳಿದು ಬಂದಿದೆ.
ಎಸ್ ಸಿ ಎಸ್ ಪಿ, ಟಿ ಎಸ್ ಪಿ ಗೆ ಅನುದಾನ ಹಂಚಿಕೆ ಮಾಡದೇ ಇರುವುದು ಏಕೆ? ಏನು ಅಂದುಕೊಂಡಿದ್ದೀರಿ? SCSP, TSP ಹಣ ಬೇರೆ ಕಡೆ ಬಳಸುತ್ತಿದ್ದೀರಾ? ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂಬುದಾಗಿ ಏರು ಧ್ವನಿಯಲ್ಲೇ ಸಂಪುಟ ಸಭೆಯಲ್ಲಿ ಸಚಿವ ಹೆಚ್.ಸಿ ಮಹದೇವಪ್ಪ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸಚಿವ ಮಹದೇವಪ್ಪ ಅವರ ಆಕ್ರೋಶ ಕಂಡು ಸಂಪುಟ ಸಹೋದ್ಯೋಗಿಗಳು ಕಕ್ಕಾಬಿಕ್ಕಿಯಾಗಿದ್ದಾರೆ. ನೇರವಾಗಿ ಸಿಎಂಗೆ ಹೇಳದೇ ಸಂಪುಟ ಸಹೋದ್ಯೋಗಿಗಳ ಮೇಲೆ ಸಚಿವ ಮಹದೇವಪ್ಪ ಅಸಮಾಧಾನ ಹೊರ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಸಚಿವ ಕೆಜೆ ಜಾರ್ಜ್ ಹಾಗೂ ಹೆಚ್.ಸಿ ಮಹದೇವಪ್ಪ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ ಎನ್ನಲಾಗುತ್ತಿದೆ. ಸಮಾಜಕ ಕಲ್ಯಾಣ ಇಲಾಖೆಯ SCSP, TSP ಅನುದಾನದ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆಯಲ್ಲಿ ಈ ಜಟಾಪಟಿಯು ನಡೆದಿದೆ ಎನ್ನಲಾಗುತ್ತಿದೆ.
ಗಂಗಾಕಲ್ಯಾಣ ಯೋಜನೆಗೆ ಸಂಬಂಧಿಸಿದ ವಿಷಯದಲ್ಲಿ ಸಚಿವರ ನಡುವೆ ಜಟಾಪಟಿ ನಡೆದಿದೆ. ಈ ವೇಳೆ ನಾನು ಎದ್ದು ಹೊರಟೇ ಬಿಡುತ್ತೇನೆ ಎಂಬುದಾಗಿ ಸಚಿವ ಮಹದೇವಪ್ಪ ಕೂಗಾಡಿದ್ದಾರೆ.
































