ಬೆಳಗಾವಿ: ಪಂಚಮಸಾಲಿ ಹೋರಾಟದ ಸಂದರ್ಭದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಗಂಭೀರ ಸ್ವರೂಪದ ಕೇಸ್ ದಾಖಲು ಮಾಡಲಾಗಿದೆ.
ಪಂಚಮಸಾಲಿ ಮೀಸಲಾತಿ ಹೋರಾಟದ 23 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸುವರ್ಣಸೌಧಕ್ಕೆ ಮುತ್ತಿಗೆ ಯತ್ನಕ್ಕೆ ಜನರಿಗೆ ಪ್ರಚೋದನೆ, ಬಳಿಕ ರಾಷ್ಟ್ರೀಯ ಹೆದ್ದಾರಿ ಬಳಿ ಹಾಕಿ ಬ್ಯಾರಿಕೇಡ್ ತಳ್ಳಿ ಗಲಾಟೆ, ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಗಲಭೆ, ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿ ಜಖಂಗೆ ಸಂಬಂಧಿಸಿದಂತೆ ವಿವಿಧ ಕಲಂನಲ್ಲಿ ಹೋರಾಟಗಾರರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.
ಬಿಎನ್‌ಎಸ್ ಅಡಿಯಲ್ಲಿ ಒಟ್ಟು ಹನ್ನೊಂದು ಕಲಂಗಳನ್ನ ಹಾಕಿ ಪ್ರಕರಣ ದಾಖಲು ಮಾಡಲಾಗಿದೆ.