ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿ ಎರಡನೇ ಬಾರಿ ಅಧೀನ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಪುರಸ್ಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೈಕೋರ್ಟ್ ಶುಕ್ರವಾರ ಮೌಖಿಕವಾಗಿ ಹೇಳಿದೆ.
ಈ ಕುರಿತು ಯಡಿಯೂರಪ್ಪ ಮತ್ತು ಪ್ರಕರಣದ ಸಹ ಆರೋಪಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರ ಪೀಠ ಹೀಗೆ ಹೇಳಿದೆ.