ಗಾಜಿಯಾಬಾದ್: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಆಧಾರದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರನ ಮೇಲೆ ಎಫ್ಐಆರ್ ದಾಖಲಾಗಿದೆ.
ಇಪ್ಪತ್ತೇಳು ವರ್ಷದ ಯಶ್ ದಯಾಳ್ ವಿರುದ್ಧ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂತ್ರಸ್ತೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕೂಡಾ ದೂರನ್ನು ನೀಡಿದ್ದರು ಎನ್ನಲಾಗಿದೆ.
ಆಕೆ ನೀಡಿದ ದೂರಿನಲ್ಲಿ ನಾನು ಯಶ್ ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಶೋಷಣೆ ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಈ ಬಾರಿ ಆರ್ ಸಿಬಿ ಗೆಲುವು ಸಾಧಿಸಲು ಎಡಗೈ ವೇಗಿ ಯಶ್ ದಯಾಳ್ ಪ್ರಮುಖ ಪಾತ್ರ ವಹಿಸಿದ್ದರು.