ನವದೆಹಲಿ: ಭಾರತ ಕೈಗೊಂಡ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ಸಡೆಸುತ್ತಿದೆ. ಪ್ರತಿಯಾಗಿ ಭಾರತೀಯ ಸೇನೆ ತಕ್ಕ ತಿರುಗೇಟು ನೀಡುತ್ತಿದೆ. ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಸೈನಿಕನೋರ್ವ ಹುತಾತ್ಮರಾಗಿದ್ದಾರೆ.
ಪಾಕಿಸ್ತಾನ ಸೈನಿಕರು ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು, ಮಧ್ಯರಾತ್ರಿಯ ನಂತರ ಶೆಲ್ಗಳು ಮತ್ತು ಮೋರ್ಟಾರ್ಗಳನ್ನು ಹಾರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸಶಸ್ತ್ರ ಪಡೆಗಳು ಪರಿಣಾಮಕಾರಿಯಾಗಿ ಪ್ರತಿದಾಳಿ ನಡೆಸಿದವು. ಇದನ್ನೂ ಓದಿ: ಆಪರೇಷನ್ ಸಿಂದೂರ್ ಬೆನ್ನಲ್ಲೇ ಪಾಕ್ಗೆ ಮತ್ತೊಂದು ಶಾಕ್ ಕೊಟ್ಟ ಬಲೂಚ್ ಲಿಬರೇಷನ್ ಆರ್ಮಿ ಬುಧವಾರ ಬೆಳಗಿನ ಜಾವ ನಡೆದ ಶೆಲ್ ದಾಳಿಯಲ್ಲಿ 5 ಫೀಲ್ಡ್ ರೆಜಿಮೆಂಟ್ನ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ ಖಚಿತಪಡಿಸಿದೆ.
