ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿಆರೋಪಿಯಾಗಿರುವ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಕುರಿತು ಅರ್ಜಿ ಸಲ್ಲಿಕೆ ವಿಚಾರಣೆ ಇಂದು ನ್ಯಾಯಾಲಯದಲ್ಲಿ ನಡೆಯಲಿದೆ.
ಲಕ್ಷ್ಮಣ್, ಜಗದೀಶ್, ನಾಗರಾಜ್, ಪ್ರದೂಷ್ ಸೇರಿ ಪ್ರಕರಣ ಕೆಲ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದಾರೆ. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಹಾಗೂ ಇತರ ಆರೋಪಿಗಳನ್ನು ಬೇರೆ ಜೈಲಿಗೆ ಹಾಕುವುದರ ಕುರಿತು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
64 ನೇ ಸೆಷನ್ಸ್ ನ್ಯಾಯಾಲಯದಲ್ಲಿ ಇಂದು ಈ ವಿಚಾರಣೆ ನಡೆಯಲಿದೆ. ದರ್ಶನ್ ಪರ ವಕಿಲರು ಕೋರ್ಟ್‌ಗೆ ದರ್ಶನ್ ರನ್ನು ಬೇರೆ ಜೈಲಿಗೆ ಕಳುಹಿಸಬಾರದು ಎಂದು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಂದು ಸ್ಥಳಾಂತರ ಕೋರಿರುವ ಅರ್ಜಿ ವಿಚಾರಣೆ ಕೋರ್ಟ್‌ನಲ್ಲಿ ನಡೆಯಲಿದೆ.