ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಜಿ.ಕೆ. ಮಿಥುನ್ ಕುಮಾರ್ ಅವರನ್ನು ಬೆಂಗಳೂರು (ಬೆಂಗಳೂರು) ಈಶಾನ್ಯ ವಿಭಾಗ ಡಿಸಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಿಥುನ್ ಕುಮಾರ್ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಬಿ. ನಿಖಿಲ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
2017 ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಬಿ. ನಿಖಿಲ್ ಅವರು ಕೋಲಾರ ಜಿಲ್ಲೆ ಎಸ್ಪಿಯಾಗಿ ಕಾರ್ಯನಿರ್ವಹಣೆ ಮಾಡಿದ್ದರು.
ಇನ್ನು ಮಿಥುನ್ಕುಮಾರ್ ಅವರನ್ನು ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಆಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಮೂರು ವರ್ಷಗಳಿಂದ ಎಸ್ಪಿಯಾಗಿ ಕೆಲಸ ಮಾಡಿರುವ ಅವರು, ಉತ್ತಮ ಕೆಲಸಗಳಿಂದ ಸಾರ್ವಜನಿಕರ ಪ್ರಸಂಸೆ ಗಳಿಸಿದ್ದರು.

































