ಬೆಂಗಳೂರು: ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಇಂದು (ಜ 26) ಶಿವಣ್ಣ ತಾಯ್ನಾಡಿಗೆ ಬಂದಿಳಿದಿದ್ದಾರೆ.
ಮೂತ್ರಕೋಶದ ಕ್ಯಾನ್ಸರ್ ಸಂಬಂಧ ಆಪರೇಷನ್ ಮಾಡಿಸಿಕೊಳ್ಳಲು ನಟ ಶಿವರಾಜಕುಮಾರ್ ಡಿ.18 ರಂದು ಅಮೆರಿಕಕ್ಕೆ ತೆರಳಿದ್ದರು. ಬಳಿಕ ಡಿ.34 ರಂದು ಆಪರೇಷನ್‌ಗೆ ಒಳಗಾಗಿದ್ದು, ಇತ್ತೀಚಿಗಷ್ಟೇ ಶಿವಣ್ಣ ತಾಯ್ನಾಡಿಗೆ ಬರುವ ಸಿಹಿ ಸುದ್ದಿಯನ್ನು ಸ್ವತಃ ವಿಡಿಯೋ ಮೂಲಕ ಹಂಚಿಕೊಂಡಿದ್ದರು. ಇದೀಗ ಸಂಪೂರ್ಣ ಗುಣಮುಖರಾಗಿ ತಾಯ್ನಾಡಿಗೆ ಮರಳಿದ್ದಾರೆ.