ಕೇವಲ 27 ರನ್‌ಗಳಿಂದ ವಿಶ್ವ ದಾಖಲೆ ಬರೆಯುವ ಅವಕಾಶ ತಪ್ಪಿಕೊಂಡ ಶುಭ್‌ಮನ್ ಗಿಲ್

WhatsApp
Telegram
Facebook
Twitter
LinkedIn

ಇಂಗ್ಲೆಂಡ್ : ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 269 ರನ್ ಬಾರಿಸಿದ್ದ ಗಿಲ್, ದ್ವಿತೀಯ ಇನಿಂಗ್ಸ್​ನಲ್ಲಿ 161 ರನ್ ಕಲೆಹಾಕಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಒಂದೇ ಪಂದ್ಯದಲ್ಲಿ ಬರೋಬ್ಬರಿ 430 ರನ್‌ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇತ್ತ ಒಂದೇ ಪಂದ್ಯದಲ್ಲಿ 430 ರನ್ ಕಲೆಹಾಕಿದರೂ, ಟೆಸ್ಟ್ ಕ್ರಿಕೆಟ್‌ನಲ್ಲಿ ಕೇವಲ 27 ರನ್‌ಗಳಿಂದ ವಿಶ್ವ ದಾಖಲೆಯೊಂದನ್ನು ಬರೆಯುವ ಅವಕಾಶವೊಂದನ್ನು ಶುಭ್‌ಮನ್ ಗಿಲ್ ತಪ್ಪಿಸಿಕೊಂಡಿದ್ದಾರೆ. ಅಂದರೆ ಶುಭ್‌ಮನ್ ಗಿಲ್ ಕೇವಲ 27 ರನ್ ಹೆಚ್ಚಿಗೆ ಗಳಿಸಿದ್ದರೆ, ಟೆಸ್ಟ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಗ್ರಹಾಂ ಗೂಚ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವ ಅವಕಾಶವಿತ್ತು.

1990 ರಲ್ಲಿ ಲಂಡನ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಭಾರತದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಗ್ರಹಾಂ ಗೂಚ್ ಮೊದಲ ಇನಿಂಗ್ಸ್​ನಲ್ಲಿ 333 ರನ್ ಬಾರಿಸಿದ್ದರು. ಅಲ್ಲದೆ ದ್ವಿತೀಯ ಇನಿಂಗ್ಸ್​ನಲ್ಲಿ 123 ರನ್ ಗಳಿಸಿದ್ದರು. ಈ ಮೂಲಕ ಒಂದೇ ಪಂದ್ಯದಲ್ಲಿ 456 ರನ್‌ಗಳಿಸಿ ವಿಶ್ವ ದಾಖಲೆ ಸೃಷ್ಟಿಸಿದ್ದರು.

ಶುಭ್‌ಮನ್ ಗಿಲ್ ಮೊದಲ ಇನಿಂಗ್ಸ್ನಲ್ಲಿ 269 ರನ್ ಹಾಗೂ ದ್ವಿತೀಯ ಇನಿಂಗ್ಸ್ನಲ್ಲಿ 161 ರನ್‌ಗಳಿಸುವುದರೊಂದಿಗೆ 430 ರನ್ ಕಲೆಹಾಕಿದ್ದರು. 430 ರನ್ ಗಳಿಸುವ ಮೂಲಕ ವಿಶ್ವ ದಾಖಲೆಯ ಸಮೀಪಕ್ಕೆ ತಲುಪಿದ್ದರು. ಆದರೆ ದ್ವಿತೀಯ ಇನಿಂಗ್ಸ್ನಲ್ಲಿ 161 ರನ್‌ಗಳಿಸಿ ಔಟಾದರು. ಒಂದು ವೇಳೆ ದ್ವಿತೀಯ ಇನಿಂಗ್ಸ್​ನಲ್ಲಿ ಶುಭ್‌ಮನ್ ಗಿಲ್ ಹೆಚ್ಚುವರಿ 27 ರನ್ ಗಳಿಸಿದ್ದರೆ, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ ಅತ್ಯಧಿಕ ರನ್‌ಗಳಿಸಿದ ಮೊದಲ ಬ್ಯಾಟರ್ ಎನಿಸಿಕೊಳ್ಳುತ್ತಿದ್ದರು. ಆದರೀಗ ಈ ದಾಖಲೆಯನ್ನು ತಪ್ಪಿಸಿಕೊಂಡ ಗಿಲ್, ಟೆಸ್ಟ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ರನ್‌ಗಳಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon