ಬೆಂಗಳೂರು: ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯರನ್ನು ಮೂಲೆಗುಂಪು ಮಾಡಿದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಇರೋದಿಲ್ಲ ಎಂದು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ಸಿದ್ದರಾಮಯ್ಯ ಮುನಿಸಿಕೊಂಡು ಪಕ್ಕಕ್ಕೆ ಹೋದರೆ, ಆಂಧ್ರದಲ್ಲಿ ಕಾಂಗ್ರೆಸ್‌ಗೆ ಬಂದಿರುವ ಗತಿ ಕರ್ನಾಟಕದ ಕಾಂಗ್ರೆಸ್‌ಗೂ ಬರುತ್ತದೆ.
ಸಿದ್ದರಾಮಯ್ಯ ಕೋಲಾರಕ್ಕೆ ಬರದಿದ್ದರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಳುಗಿ ಹೋಗುತ್ತದೆ. ಆಮೇಲೆ ಕಸರತ್ತು ಮಾಡಿ ಸಿದ್ದರಾಮಯ್ಯರನ್ನು ವಿರೋಧ ಪಕ್ಷದಲ್ಲಿ ಕೂರಿಸಬೇಕಾಗುತ್ತದೆ ಎಂದಿದ್ದಾರೆ.