ಚಿತ್ರದುರ್ಗ: ಒಳಮೀಸಲಾತಿ ವಿಷಯದಲ್ಲಿ ಸಿದ್ದರಾಮಯ್ಯ ನುಡಿದಂತೆ ನಡೆದು ಮಾದಿಗರ ಹೃದಯ ಗೆದ್ದಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
ನಗರದ ಒನೆಕ ಓಬವ್ವ ವೃತ್ತದಲ್ಲಿ ಭಾನುವಾರ ಆಯೋಜಿಸಿದ್ದ ಮಾದಿಗರ ವಿಜಯೋತ್ಸವ ಹಾಗೂ ಸಿಎಂ ಸಿದ್ದರಾಮಯ್ಯಗೆ ಕೃತಜ್ಞತೆ ಕಾಯಕ್ರಮದಲ್ಲಿ ಮಾತನಾಡಿದರು.
ಒಳಮೀಸಲಾತಿ ಹೋರಾಟ ಸುಧೀರ್ಘ 35 ವರ್ಷ ಹಾದಿ ಸವಿಸಿದೆ. ಸಹಸ್ರಾರು ಮಂದಿ ಮನೆ ತೊರೆದು ಚಳವಳಿ ನಡೆಸಿದ್ದಾರೆ. ಅನೇಕರು ಜೀವತೆತ್ತಿದ್ದಾರೆ. ಎಲ್ಲ ಪಕ್ಷಗಳ ಮುಖಂಡರು, ಇತರೆ ಸಮುದಾಯದವರು ಮಾದಿಗರ ಕುರಿತು ಮಮತೆ ತೋರಿದ್ದಾರೆ. ಪರಿಣಾಮ ಆಗಸ್ಟ್ 19ರಂದು ಮಾದಿಗರಿಗೆ ನೈಜ ಸ್ವತಂತ್ರವನ್ನು ಸಿದ್ದರಾಮಯ್ಯ ನೀಡಿದ್ದಾರೆ ಎಂದರು.
ಬಸವ ಅನುಯಾಯಿಗಳಾದ ನಾವು ಶಾಂತಿ-ಸೌಹಾರ್ದತೆಯಿAದ 35 ವರ್ಷ ಎಲ್ಲ ರೀತಿ ಹೋರಾಟ ನಡೆಸಿದ್ದೇವು. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಒಳಮೀಸಲಾತಿ ಪರವಿದ್ದವು. ಆದರೆ, ಅದನ್ನು ಜಾರಿಗೊಳಿಸುವ ಅವಕಾಶ ಅವರಿಗೆ ದೊರೆಯಲಿಲ್ಲ. ಆದರೆ, ಭಾಗ್ಯಗಳ ಸರದಾರ ಸಿದ್ದರಾಮಯ್ಯ ಅವರಿಗೆ ಮಾದಿಗರಿಗೆ ನ್ಯಾಯ ಕಲ್ಪಿಸುವ ಸೌಭಾಗ್ಯ ದೊರೆಯಿತು. ಅದನ್ನು ಸಮರ್ಥವಾಗಿ ನಿರ್ವಹಿಸಿದರು ಎಂದು ಶ್ಲಾಘೀಸಿದರು.
ಎಂದೂ ಮಾದಿಗರು ಪರಿಶಿಷ್ಟ ಜಾತಿಯಲ್ಲಿ ಶೇ.1ರಷ್ಟು ಮೀಸಲಾತಿ ಪಡೆಯಲು ಸಾಧ್ಯವಾಗಿಲ್ಲ. ಆದರೆ, ಈಗ ಸಾಮಾಜಿಕ ನ್ಯಾಯದ ಹರಿಕಾರ ಸಿದ್ದರಾಮಯ್ಯ ಶೇ.6ರಷ್ಟು ಮೀಸಲಾತಿ ನೀಡಿ ನಮ್ಮ ಪ್ರಗತಿಗೆ ಸಹಕರಿಸಿದ್ದಾರೆ. ಕೊಟ್ಟ ಅವಕಾಶವನ್ನು ನಾವು ಸಮರ್ಥವಾಗಿ ಸದ್ಬಳಕೆ ಮಾಡಿಕೊಂಡು ಮುಖ್ಯವಾಹಿನಿಗೆ ಬರಬೇಕು. ಉನ್ನತ ಶಿಕ್ಷಣ, ಉದ್ಯೋಗ, ಆರ್ಥಿಕ ನೆರವು ಪಡದು ಅಭಿವೃದ್ಧಿ ಸಾಧಿಸಬೇಕೆಂದು ತಿಳಿಸಿದರು.
ಯಾರೇ ಅನುಕೂಲ ಮಾಡಿದರೂ ಅದಕ್ಕೆ ಪ್ರತಿಯಾಗಿ ಕೃತಜ್ಞತೆ ಸಲ್ಲಿಸುವ ಹುಟ್ಟುಗುಣ ಮಾದಿಗರದ್ದಾಗಿದೆ. ಈ ಕಾರಣಕ್ಕೆ ಅನೇಕ ಅಡೆತಡೆಗಳ ಮಧ್ಯೆ ಮೊದಲಿನಿಂದಲೂ ಭರವಸೆ ನೀಡಿದಂತೆ ಶೇ.6 ಮೀಸಲಾತಿ ಸಿದ್ದರಾಮಯ್ಯ ನೀಡಿದ್ದಾರೆ. ಅವರಿಗೆ ಸಮಾಜ ಸದಾ ಕೃತಜ್ಞರಾಗಿರುತ್ತದೆ. ಇನ್ನಷ್ಟು ಬೇಡಿಕೆಗಳಿದ್ದು, ಅವುಗಳನ್ನು ಈಡೇರಿಸಿಕೊಳ್ಳುವತ್ತ ನಾವುಗಳು ಒಗ್ಗಟ್ಟಿನಿಂದಹೆಜ್ಜೆ ಹಾಕಬೇಕಿದೆ ಎಂದರು.
ರಾಯಚೂರಿನಲ್ಲಿ ಶಕ್ತಿಪ್ರದರ್ಶನ:
ಮಾದಿಗರ ಹೋರಾಟ ಈಗ ಆರಂಭವಾಗಿದೆ. ಒಳಮೀಸಲಾತಿ ಜಾರಿಗೊಂಡಿತು ಎಂದು ನಾವೆಲ್ಲರೂ ನಿದ್ರೆಗೆ ಜಾರುವಂತಿಲ್ಲ. ಇನ್ನಷ್ಟು ಬೇಡಿಕೆಗಳಿಗಾಗಿ ಹೋರಾಟ ನಡೆಸಬೇಕು. ರಾಯಚೂರಿನಲ್ಲಿ ಬೃಹತ್ ಸಮಾವೇಶ ಆಯೋಜಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿ ಅವರಿಗೆ ಬೇಡಿಕೆಗಳ ಪಟ್ಟಿ ಸಲ್ಲಿಸಲಾಗುವುದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು, ಸಿದ್ದರಾಮಯ್ಯ ಸಿಎಂಆಗಲು ಮಾದಿಗರ ಕೊಡುಗೆ ಇದೆ. ಅದೇ ರೀತಿ ನಮ್ಮ ಸಮಾಜಕ್ಕೆ ಹೆಚ್ಚು ಅನುಕೂಲ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಅವರನ್ನು ಗೌರವಿಸುವುದು, ಕೃತಜ್ಞತೆ ಸಲ್ಲಿಸುವುದು ನಮ್ಮ ಕರ್ತವ್ಯ ಎಂದು ಆಂಜನೇಯ ಹೇಳಿದರು.
ಇಡೀ ಸಚಿವ ಸಂಪುಟ, ಕಾಂಗ್ರೆಸ್ ಪಕ್ಷ ಒಳಮೀಸಲಾತಿ ವಿಷಯದಲ್ಲಿ ಒಗ್ಗಟ್ಟು ಪ್ರದರ್ಶಿಸಿ ಜಾರಿಗೊಳಿಸುವಲ್ಲಿ ಶ್ರಮಿಸಿದೆ. ಜೊತೆಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ಹೋರಾಟಗಾರರು ಹೀಗೆ ನಮಗೆ ಸಹಕರಿಸಿ ಎಲ್ಲರಿಗೂ ಧನ್ಯವಾದಗಳನ್ನು ಇಲ್ಲಿಂದಲೇ ಅರ್ಪಣೆ ಎಂದರು.
ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡಿ, 1993ರಿಂದಲೂ ಒಳಮೀಸಲಾತಿ ಹೋರಾಟದಲ್ಲಿ ಆಂಜನೇಯ, ಕೆ.ಎಚ್.ಮುನಿಯಿಪ್ಪ ಮುಂಚೂಣಿಯಲಿದ್ದು, ಸುಪ್ರೀಂ ಕೋರ್ಟ್ ತೀರ್ಪು ಬಳಿಕ ಬೀದಿ ಬೀದಿ ಸುತ್ತಿದ್ದಾರೆ, ಸಿಎಂ ಅವರ ಮೇಲೆ ನಿರಂತರ ಒತ್ತಡ ತಂದಿದ್ದಾರೆ. ಜೊತೆಗೆ ಅನೇಕ ಸಂಘಠನೆಗಳ ನಾಯಕರು, ಮುಖಂಡರ ಸೇವೆ ಸ್ಮರಣೀಯ ಎಂದು ತಿಳಿಸಿದರು.
ಡಾ.ಬಿ.ತಿಪ್ಪೇಸ್ವಾಮಿ ಜೆಜೆ ಹಟ್ಟಿ ಮಾತನಾಡಿ, ಆಂಜನೇಯ ಅವರ ಆಗಮನ ಕಾರಣಕ್ಕೆ ದಿಢೀರ್ ಕಾರ್ಯಕ್ರಮ ಆಯೋಜಿಸಿದ್ದು, ಮುಂದೆ ಎಲ್ಲ ಪಕ್ಷಗಳಲ್ಲಿರುವ ಸಮುದಾಯದವರನ್ನು ಸೇರಿಸಿಕೊಂಡು ಬೃಹತ್ವಿಜಯೋತ್ಸವ ಆಚರಿಸುವ ಅಗತ್ಯ ಇದೆ ಎಂದು ತಿಳಿಸಿದರು.
ಒಳಮೀಸಲಾತಿ ಜಾರಿಗಾಗಿ ಅನೇಕರು ಪ್ರಾಣ ತ್ಯಾಗ ಮಾಡಿದ್ದಾರೆ. ಇನ್ನೂ ಕೆಲವರುಮನೆ-ಸ್ವಂತ ಬದುಕು ಮರೆತು ನಿಸ್ವಾರ್ಥವಾಗಿ ಚಳವಳಿ ನಡೆಸಿದ್ದಾರೆ. ಅವರೆಲ್ಲರಶ್ರಮದ ಫಲ ಇಂದು ಸಿದ್ದರಾಮಯ್ಯ ನಮಗೆ ನ್ಯಾಯ ಕಲ್ಪಿಸಿಕೊಟ್ಟಿದ್ದಾರೆ ಎಂದರು.
ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಮಾತನಾಡಿ, ಮಾದಿಗರು ವಿವಿಧ ಸಂಘಟನೆಗಳ ಹೆಸರಲ್ಲಿ ಹಂಚಿಹೋಗಿದ್ದಾರೆ. ಸ್ವಪ್ರತಿಷ್ಠೆ, ಸ್ವಾರ್ಥ ತೊರೆದು ಮಾದಿಗ ಹೆಸರಿನಲ್ಲಿ ಒಗ್ಗೂಡಿದರೆ ಹಕ್ಕು ಪಡೆಯಲು ಸಾಧ್ಯ. ಸಿದ್ದರಾಮಯ್ಯ ಅವರ ಬದ್ಧತೆ ಪ್ರಶ್ನಾತೀತ ಎಂದು ತಿಳಿಸಿದರು.
ಲಿಡ್ಕರ್ ಮಾಜಿ ಅಧ್ಯಕ್ಷ ಓ.ಶಂಕರ್, ಜಿಪಂ ಮಾಜಿ ಸದಸ್ಯ ಆರ್.ನರಸಿಂಹರಾಜು, ಐನಹಳ್ಳಿ ಗ್ರಾಪಂ ಅಧ್ಯಕ್ಷ ಆರ್.ಉಮೇಶ್, ಮುಖಂಡರಾದ ಕುಂಚಿಗನಾಳ್ ಮಹಾಲಿಂಗಪ್ಪ, ಕೆ.ಮಲ್ಲೇಶ್, ಕೆ.ಟಿ.ಶಿವಕುಮಾರ್, ಕೆಂಗುಂಟೆ ಜಯ್ಯಪ್ಪ, ಡಿ.ಶಿವಣ್ಣ ಜೆಜೆ ಹಟ್ಟಿ, ಬೀರಾವರ ಪ್ರಕಾಶ್, ರಮೇಶ್ ಕೋಟಿ, ಪ್ರಸನ್ನ ಜಯಣ್ಣ, ಕಣ್ಮೇಶ್, ಎಂ.ಆರ್.ಶಿವರಾಜ್, ಅನಿಲ್ ಕೋಟಿ, ಚೇತನ್ ಬೋರೇನಹಳ್ಳಿ, ರವೀಂದ್ರ,
ತಿಪ್ಪೇಸ್ವಾಮಿ, ಮಲ್ಲಿಕಾರ್ಜುನ್, ರುದ್ರಮುನಿ, ಚಿದಾನಂದ, ಯಶವಂತ