ಬೆಂಗಳೂರು: ಮಾಜಿ CM ಸಿದ್ದರಾಮಯ್ಯನವರು ವರುಣಾ ಕ್ಷೇತ್ರದ ಜತೆಗೆ ಕೋಲಾರದಿಂದಲೂ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ವರದಿಯಾಗಿದೆ.
ರಾಹುಲ್ ಗಾಂಧಿ ಏ.9ರಂದು ಕೋಲಾರಕ್ಕೆ ಆಗಮಿಸುತ್ತಿದ್ದು ಅದಕ್ಕೂ ಮೊದಲು ಸಿದ್ದು ಕೋಲಾರ ಸ್ಪರ್ಧೆ ಬಗ್ಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ.
ಆ ಮೂಲಕ ಕೋಲಾರದ ರಾಹುಲ್ ಭೇಟಿ ಉಸ್ತುವಾರಿಯನ್ನು ಅವರೇ ನೋಡಿಕೊಳ್ಳುತ್ತಾರೆ. ಕೋಲಾರದಿಂದ ಕಣಕ್ಕಿಳಿಯಲು ಸಿದ್ದು ಅವರೇ ಒಲವು ವ್ಯಕ್ತಪಡಿಸಿದ್ದು, ಅದಕ್ಕೆ ಹೈಕಮಾಂಡ್ ಕೂಡ ಒಪ್ಪಿಗೆ ಕೊಟ್ಟಿದೆ ಎಂದು ಮೂಲಗಳು ತಿಳಿಸಿವೆ.