ಮೈಸೂರು : ದಸರಾ ಬಳಿಕ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಅವರು ಭಾನುವಾರ ನಗರೆದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಹೇಳಿದರು. ಇದೇ ವೇಳೆ ಅವರು ಮಾತನಾಡುತ್ತ, . ರಾಜ್ಯದಲ್ಲಿ ಅಭಿವೃದ್ಧಿ ಮಾತೇ ಇಲ್ಲ. ಈ ಮಧ್ಯೆ ಸತೀಶ್ ಜಾರಕಿಹೊಳಿಯನ್ನು ಸಿದ್ದರಾಮಯ್ಯನವರೇ ದೆಹಲಿಗೆ ಕಳುಹಿಸಿದ್ದರು.
ಎಲ್ಲಾ ಬೆಳವಣಿಗೆಗಳನ್ನು ನೋಡಿದರೆ ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಯಾವ ಸಂದರ್ಭದಲ್ಲಿ ಬೇಕಾದರೂ ರಾಜೀನಾಮೆ ನೀಡಬಹುದು ಅಂತ ಹೇಳಿದರು.ಇನ್ನೂ ಇದೇ ವೇಳೇ ಅವರು ತಮ್ಮ ಮಾತನ್ನು ಮುಂದುವರೆಸಿ, ಏಳೆಂಟು ಜನ ಮುಖ್ಯಮಂತ್ರಿ ಹುದ್ದೆ ಮೇಲೆ ಟವಲ್ ಹಾಕಿ ಕೂತಿದ್ದಾರೆ. ಯಾರು ಮುಖ್ಯಮಂತ್ರಿ ಆಗುತ್ತಾರೆ ಎನ್ನುವುದು ಕೂಡ ನಮಗೆ ತಿಳಿದಿಲ್ಲ ಅಂತ ಹೇಳಿದರು