ಕೊಪ್ಪಳ : ರಾಜ್ಯದಲ್ಲಿ ಸದ್ಯ ಸಿಎಂ ಖುರ್ಚಿ ಖಾಲಿ ಇಲ್ಲ. ಈ ಬಗ್ಗೆ ಚರ್ಚೆಯೂ ಅಗತ್ಯ ಇಲ್ಲ. ಐದು ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಖುರ್ಚಿಯೂ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಸತೀಶ್ ಜಾರಕಿಹೊಳಿ ಮಾತನಾಡಿರಬಹುದು. ಅದು ಅವರ ವೈಯಕ್ತಿಕ ಅಭಿಪ್ರಾಯ. ಆದರೆ ಕೆಪಿಸಿಸಿ ಅಧ್ಯಕ್ಷರ ಹುದ್ದೆಯೂ ಖಾಲಿ ಇಲ್ಲ ಎಂದು ಹೇಳಿದರು.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪಾತ್ರ ಸ್ವಲ್ಪವೂ ಇಲ್ಲ. ಸಿದ್ದರಾಮಯ್ಯ ಅವರನ್ನು ಅಲುಗಾಡಿಸಿದರೆ ಕಾಂಗ್ರೆಸ್‌ಗೆ ತೊಂದರೆ ಆಗುತ್ತದೆ ಎಂದು ಬಿಜೆಪಿಗರು ಕಿರಿಕಿರಿ ಮಾಡುತ್ತಿದ್ದಾರೆ. ಇದೆಲ್ಲ ನಡೆಯುವುದಿಲ್ಲ ಎಂದರು.