ಬೆಂಗಳೂರು: ರಾಜ್ಯದ ಗಡಿಯ 865 ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿಗೊಳಿಸಿರುವುದನ್ನು ತಕ್ಷಣ ವಾಪಸ್ ಪಡೆಯಬೇಕೆಂದು ಮಾಜಿ CM ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ ಮಹಾರಾಷ್ಟ್ರ ಸರ್ಕಾರದ ಈ ಕ್ರಮ ಉದ್ಧಟತನದಿಂದ ಕೂಡಿದೆ. ರಾಜ್ಯದಲ್ಲಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಅವಕಾಶ ನೀಡಲ್ಲ ಎಂದು CM ಬೊಮ್ಮಾಯಿ ಮತ್ತು ಅಮಿತ್ ಶಾ ಭರವಸೆ ನೀಡಿದ್ದರು. ಇಬ್ಬರ ಮಾಹಿತಿಗೆ ಅಲ್ಲಿನ ಸಿಎಂ ಕವಡೆಕಾಸಿನ ಕಿಮ್ಮತ್ತು ಕೊಟ್ಟಿಲ್ಲ. ಕನ್ನಡಿಗರು ಇದನ್ನು ಸಹಿಸುವುದಿಲ್ಲ ಎಂದಿದ್ದಾರೆ.