ಬೆಂಗಳೂರು ಸಹಿತ ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳ(ವಿಐಪಿ) ಸಂಚಾರದ ವೇಳೆ ಸೈರನ್ ಬಳಕೆ ನಿಷೇಧಿಸಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿ-ಐಜಿಪಿ) ಡಾ| ಎಂ.ಎ.ಸಲೀಂ ಸೋಮವಾರ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರ ಸುರಕ್ಷೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ವಿಐಪಿ ಸಂಚಾರದ ಸಂದರ್ಭದಲ್ಲಿ ವಾಹನಗಳ ಸೈರನ್ ನಿಷೇಧಿಸಲಾಗಿದೆ. ಅನವಶ್ಯಕವಾಗಿ ಸೈರನ್ ಮೊಳಗಿಸುವುದರಿಂದ ಗಣ್ಯರು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗಿ ಗಣ್ಯರಿಗೆ ಅಪಾಯ ಉಂಟಾಗುವ ಸಾಧ್ಯತೆಯೂ ಇದೆ ಎಂದು ಆದೇಶದಲ್ಲಿ ಉಲ್ಲೇಖೀಸಲಾಗಿದೆ.