ಮುಂಬೈ: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಐಸಿಸಿ ಏಕದಿನ ಬ್ಯಾಟರ್ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಸ್ಮೃತಿ ಈ ಬಾರಿ 727 ಅಂಕಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನಕ್ಕೇರಿದ್ದಾರೆ. ವಿಶೇಷ ಎಂದರೆ ಸ್ಮೃತಿ ಮಂಧಾನ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬ್ಯಾಟರ್ ಟಾಪ್-10 ನಲ್ಲಿ ಕಾಣಿಸಿಕೊಂಡಿಲ್ಲ.
ಅಷ್ಟೇ ಅಲ್ಲದೆ ಐಸಿಸಿ ಏಕದಿನ ಬ್ಯಾಟರ್ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಸ್ಮೃತಿ ಮೊದಲ ಸ್ಥಾನಕ್ಕೇರುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮುನ್ನ 2019 ರಲ್ಲಿ ಅವರು ಅಗ್ರಸ್ಥಾನ ಅಲಂಕರಿಸಿದ್ದರು. ಆದರೆ ಈ ಬಾರಿ ನಡೆದ ಸೌತ್ ಆಫ್ರಿಕಾ, ಶ್ರೀಲಂಕಾ ನಡುವಣ ತ್ರಿಕೋನ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸ್ಮೃತಿ ಮಂಧಾನ 6 ವರ್ಷಗಳ ಬಳಿಕ ಐಸಿಸಿ ಏಕದಿನ ಬ್ಯಾಟರ್ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ಮೃತಿ ಮಂಧಾನ ಅವರ ನಂತರದ ಸ್ಥಾನದಲ್ಲಿ ಇಂಗ್ಲೆಂಡ್ನ ನಟಾಲಿ ಸ್ಕಿವರ್-ಬ್ರಂಟ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಮೂರನೇ ಸ್ಥಾನವನ್ನು ಸೌತ್ ಆಫ್ರಿಕಾದ ಲಾರಾ ವೋಲ್ವಾರ್ಡ್ ಪಡೆದುಕೊಂಡಿದ್ದಾರೆ.