ಮುಂಬೈ : ಭಾರತ ಪುರುಷರ ಕ್ರಿಕೆಟ್ ತಂಡದಲ್ಲಿ ನಾಯಕತ್ವ ಬದಲಾಗಬೇಕು ಎಂಬ ಕೂಗು ಒಂದೆಡೆ ಕೇಳಿ ಬರುತ್ತಿರುವ ನಡುವೆಯೇ, ಭಾರತ ಮಹಿಳಾ ಕ್ರಿಕೆಟ್ ತಂಡದಲ್ಲಿ ನಾಯಕಿಯ ಬದಲಾವಣೆ ನಡೆದಿದೆ.
ಜನವರಿ 10 ರಿಂದ ಭಾರತ ಮಹಿಳಾ ತಂಡ ಹಾಗೂ ಐರ್ಲೆಂಡ್ ಮಹಿಳಾ ತಂಡಗಳ ನಡುವೆ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಈ ಏಕದಿನ ಸರಣಿಗೆ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ತಂಡದ ನಾಯಕತ್ವವನ್ನು ಹರ್ಮನ್ಪ್ರೀತ್ ಕೌರ್ ಬದಲಿಗೆ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರಿಗೆ ನೀಡಲಾಗಿದೆ.
ವಾಸ್ತವವಾಗಿ ತಂಡದ ನಿಯಮಿತ ನಾಯಕಿ ಹರ್ಮನ್ಪ್ರೀತ್ ಕೌರ್ಗೆ ಅವರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ತಂಡ ಉಪನಾಯಕಿಯಾಗಿರುವ ಸ್ಮೃತಿ ಮಂಧಾನ ಅವರಿಗೆ ತಂಡದ ನಾಯಕತ್ವ ನೀಡಲಾಗಿದೆ. ಉಪನಾಯಕತ್ವದ ಜವಬ್ದಾರಿವನ್ನು ಆಲ್ರೌಂಡರ್ ದೀಪ್ತಿ ಶರ್ಮಾ ಅವರಿಗೆ ವಹಿಸಲಾಗಿದೆ. ಈ ಸರಣಿಯಿಂದ ಹರ್ಮನ್ಪ್ರೀತ್ ಜೊತೆಗೆ ಅನುಭವಿ ವೇಗದ ಬೌಲರ್ ರೇಣುಕಾ ಸಿಂಗ್ ಠಾಕೂರ್ ಅವರಿಗೂ ವಿಶ್ರಾಂತಿ ನೀಡಲಾಗಿದೆ.
ಏಕದಿನ ಸರಣಿಗೆ ಭಾರತ ಮಹಿಳಾ ತಂಡ ಈ ಕೆಳಗಿನಂತಿದೆ:
ಸ್ಮೃತಿ ಮಂಧಾನ (ನಾಯಕಿ), ದೀಪ್ತಿ ಶರ್ಮಾ (ಉಪನಾಯಕಿ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ಜೆಮಿಮಾ ರಾಡ್ರಿಗಸ್, ಉಮಾ ಚೆಟ್ರಿ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ತೇಜಲ್ ಹಸಬ್ನಿಸ್, ರಾಘ್ವಿ ಬಿಸ್ಟ್, ಮಿನ್ನು ಮಣಿ, ಪ್ರಿಯಾ ಮಿಶ್ರಾ, ತನುಜಾ ಕನ್ವರ್, ಟೈಟಾಸ್ ಸಾಧು, ಸೈಮಾ ಠಾಕೋರ್, ಸಯಾಲಿ ಸತ್ಘರೆ