ಬೆಂಗಳೂರು : ತಂದೆಯ ಆಸ್ತಿಯಲ್ಲಿ ಪುತ್ರನ ಜೊತೆಗೆ ಪುತ್ರಿಗೂ ಸಮಾನ ಪಾಲಿದೆ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ನೇತೃತ್ವದ ಪೀಠ ಆದೇಶ ಹೊರಡಿಸಿದೆ.
ತಂಗಿಯ ವಿವಾಹಕ್ಕಾಗಿ ಜಮೀನು ಅಡಮಾನ ಇಟ್ಟು ಪಡೆದ ಸಾಲ ಇದುವರೆಗೂ ತೀರಿಲ್ಲ. ಹೀಗಾಗಿ ತಂದೆಯ ಆಸ್ತಿಯಲ್ಲಿ ಸಹೋದರಿಗೆ ಆಸ್ತಿಯಲ್ಲಿ ಭಾಗ ಕೇಳುವ ಹಕ್ಕಿಲ್ಲ ಎಂಬುದಾಗಿ ಸಹೋದರನ ವಾದ ತಳ್ಖಿಹಾಕಿದ ಹೈಕೋರ್ಟ್, ತಂದೆಯ ಆಸ್ತಿಯಲ್ಲಿ ಮಗಳಿಗೂ ಸಮಾನ ಹಕ್ಕಿದೆಎಂದು ತಿಳಿಸಿದೆ.
ತುಮಕೂರಿನ ಯಲ್ಲಾಪುರದ ವೆಂಕಟೇಶ್ ಹಾಗೂ ಅವರ ತಾಯಿ ವೆಂಕಟಲಕ್ಷಮ್ಮ ಎಂಬುವವರು ಸಲ್ಲಿಸಿದ ಮೇಲ್ಮನವಿಯನ್ನು ಕೋರ್ಟ್ ವಿಚಾರಣೆ ನಡೆಸಿದೆ. ಮೇಲ್ಮನವಿದಾರ ವೆಂಕಟೇಶ್ ಅವರ ಸೋದರತ್ತೆಯಾದ ಲಕ್ಷ್ಮಿ ದೇವಮ್ಮ ಕೂಡ ಅವರ ತಂದೆಯ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರು ಎಂದು ಕೋರ್ಟ್ ತೀರ್ಪು ನೀಡಿದೆ.