ಬೆಂಗಳೂರು: : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ನಾಲ್ಕು ವರ್ಷಗಳ ಬಳಿಕ ಮೊದಲ ಬಾರಿಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಅವರು ಪಕ್ಷದ ಅಭ್ಯರ್ಥಿಗಳ ಪರವಾಗಿ ಹುಬ್ಬಳ್ಳಿಯಲ್ಲಿ ಶನಿವಾರ ಪ್ರಚಾರ ನಡೆಸಲಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಶಿವಾಜಿನಗರದಲ್ಲಿ ಭಾನುವಾರ ರ್ಯಾಲಿ ನಡೆಸಲಿದ್ದಾರೆ.