ಬೆಂಗಳೂರು: Sorry…ಇದು ನಾನು ಹೇಳಿದ್ದಲ್ಲ. ನನ್ನ ತಂದೆಯಾಗಲಿ, ನನ್ನ ಪತ್ನಿಯಾಗಲಿ ಹೇಳಿದ್ದಲ್ಲ ಇದನ್ನು ಹೇಳಿದ್ದು ಸ್ವತಃ ಸಾವರ್ಕರ್ ಅವರೇ! ಎಂದು ದಿನೇಶ್ ಗುಂಡೂರಾವ್ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ನಿನ್ನೆಯ ಹೇಳಿಕೆಯ ಕುರಿತು ವಿವಾದವಾದ ನಂತರ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿರುವ ದಿನೇಶ್ ಗುಂಡೂರಾವ್ Sorry…ಇದು ನಾನು ಹೇಳಿದ್ದಲ್ಲ. ನನ್ನ ತಂದೆಯಾಗಲಿ, ನನ್ನ ಪತ್ನಿಯಾಗಲಿ ಹೇಳಿದ್ದಲ್ಲ ಇದನ್ನು ಹೇಳಿದ್ದು ಸ್ವತಃ ಸಾವರ್ಕರ್ ಅವರೇ! ಹೇಳಿದ್ದು ಎಂದು ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ.
ಗಾಂಧೀವಾದ ಹಾಗೂ ಸಾವರ್ಕರ್ ಅವರ ಮೂಲಭೂತ ವಾದದ ಬಗ್ಗೆ ವಿಶ್ಲೇಷಣೆ ಮಾಡಿದ್ದೇನೆಯೇ ಹೊರತು ಸಾವರ್ಕರ್ ಅವರ ಬಗ್ಗೆ ವೈಯಕ್ತಿಕ ಟೀಕೆ ಮಾಡುವ ಉದ್ದೇಶ ನನ್ನದಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ಸಾವರ್ಕರ್ ಮಾಂಸ ಹಾರಿಯಾಗಿದ್ದರು ಎಂಬ ತಮ್ಮ ಹೇಳಿಕೆಗೆ ಮಾಧ್ಯಮಗಳು ವಿವಾದದ ಸ್ವರೂಪ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ಸ್ಪಷ್ಟನೆ ನೀಡಿದ ಸಚಿವರು, ತಮ್ಮ ಹೇಳಿಕೆಯನ್ನ ತಪ್ಪಾಗಿ ಅರ್ಥೈಸುವುದು ಸರಿಯಲ್ಲ ಎಂದರು. ಗಾಂಧೀಜಿಯವರು ಸಸ್ಯಹಾರಿಯಾಗಿದ್ದರು. ಹಿಂದು ಧರ್ಮ ಹಾಗೂ ನಮ್ಮ ದೇಶದ ಸಂಸ್ಕೃತಿ, ಸಂಪ್ರದಾಯಗಳ ಮೇಲೆ ಅವರಿಗೆ ಅಪಾರವಾದ ನಂಬಿಕೆಯಿತ್ತು. ಆದರೆ ಸಾವರ್ಕರ್ ಅವರು ನಾಸ್ತಿಕರಾಗಿ ಹಿಂದು ರಾಷ್ಟ್ರ ಕಟ್ಟಲು ಹೊರಟಿದ್ದರು.
ಅವರ ಮೂಲಭೂತವಾದ ನಮ್ಮ ದೇಶದ ಸಂಸ್ಕೃತಿಯಲ್ಲ. ಅದು ಯುರೋಪ್ ನಿಂದ ಬಂದಿದ್ದು. ಅಲ್ಲದೇ ಸಾವರ್ಕರ್ ಮಾಂಸಹಾರಿಯಾಗಿದ್ದರು. ಗೋ ಹತ್ಯೆಯನ್ನ ಅವರು ವಿರೋಧಿಸಿರಲಿಲ್ಲ. ಒಂದು ರೀತಿ ಅವರು ಮಾಡರ್ನಿಸ್ಟ್ ಆಗಿ ಕಾಣಿಸಿಕೊಂಡರೂ, ಅವರ ಮೂಲಭೂತವಾದ ನಮ್ಮ ದೇಶದ ಪರಂಪರೆಗೆ ವಿರುದ್ಧವಾಗಿದೆ. ಹೀಗಾಗಿ ದೇಶದಲ್ಲಿ ಗಾಂದೀವಾದ ಗೆಲ್ಲಬೇಕು ಎಂದು ಹೇಳಿಕೆ ನೀಡಿದ್ದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು.