ಧಾರವಾಡ : ರಾಜ್ಯ ಡಿಜಿ ಮತ್ತು ಐಜಿಪಿ ಹಾಗೂ ಧಾರವಾಡದ ಎಸ್ ಪಿ ಅವರಿಗೆ ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ.
ಏಕೆಂದರೆ ಧಾರವಾಡದ ಅರುಣ ಹಿರೆಹಾಳ ನೀಡಿರುವ ದೂರಿನ ಮೇರೆಗೆ ನೋಟಿಸ್ ನೀಡಲಾಗಿದೆ. ಧಾರವಾಡ ಪೊಲೀಸ್ ವರಿಷ್ಠ ಅಧಿಕಾರಿ ಡಾ. ಗೋಪಾಲ್ ಬ್ಯಾಕೋಡ್ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಗೆ ನೋಟಿಸ್ ಜಾರಿ ಮಾಡಲಾಗಿದೆ ಕುದ್ದು ವಿಚಾರಣೆಗೆ ಹಾಜರಾಗುವಂತೆ ಎಸ್‌ಟಿ ಆಯೋಗ ಸೂಚನೆ ನೀಡಿದೆ. ಡಿಸೆಂಬರ್ 12ರಂದು ದೆಹಲಿಯ ಎಸ್ ಟಿ ಆಯೋಗದ ಕಚೇರಿಗೆ ಬರಲು ಸೂಚಿಸಿದೆ.
ಧಾರವಾಡದ ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಿಶಿಷ್ಟ ಪಂಗಡದ ವಾಲ್ಮೀಕಿ ಮಠಕ್ಕೆ ಸೇರಿದ್ದು ಎನ್ನಲಾದ ಸಂಸ್ಥೆಯಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ವಿರುದ್ಧ ಅಕ್ರಮ ಎಸಗಿದ್ದ ಆರೋಪ ಕೇಳಿ ಬಂದಿತ್ತು. 2022ರ ನವೆಂಬರ್ ನಲ್ಲಿ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ಗಲಾಟೆ ನಡೆದಿತ್ತು. ಘಟನೆಯ ಸಂಬಂಧ ಎಫ್ಐಆರ್ ದಾಖಲಿಸಿಕೊಳ್ಳದ ಆರೋಪ ಕೇಳಿ ಬಂದಿತ್ತು.