ಶಬರಿಮಲೆ: ಅರಣ್ಯ ಮಾರ್ಗವಾಗಿ ಕಾಲ್ನಡಿಗೆಯಲ್ಲಿ ಬರುವ ಶಬರಿಮಲೆ ಭಕ್ತರಿಗೆ ವಿಶೇಷ ಪಾಸ್‌ಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ತಿರುವಾಂಕೂರು ದೇವಸ್ವಂ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ವರ್ಚುವಲ್ ಸರತಿ ವ್ಯವಸ್ಥೆ ಮತ್ತು ಸ್ಪಾಟ್ ಬುಕ್ಕಿಂಗ್ ಮೂಲಕ ಪಂಪಾ ಮೂಲಕ ಆಗಮಿಸುವ ಭಕ್ತರು ದರ್ಶನಕ್ಕಾಗಿ ದೀರ್ಘಾವಧಿ ಕಾಯುವ ಸಮಯವನ್ನು ತಡೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದೇವಸ್ವಂ ಮಂಡಳಿ ಸದಸ್ಯ ಎ.ಅಜಿಕುಮಾರ್ ಇಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಹಿಂದೆ ಅರಣ್ಯ ಮಾರ್ಗದಲ್ಲಿ ಸಂಚರಿಸುವ 5,000 ಭಕ್ತರಿಗೆ ವಿಶೇಷ ಪಾಸ್ ನೀಡುವ ವ್ಯವಸ್ಥೆ ಮಾಡಲಾಗಿತ್ತು.
ಆದರೆ, ಅರಣ್ಯ ಮಾರ್ಗವಾಗಿ ಆಗಮಿಸುವ ಭಕ್ತರ ಸಂಖ್ಯೆ ಐದು ಪಟ್ಟು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಪಾಸ್ ನೀಡುವುದಕ್ಕೆ ನಿರ್ಬಂಧ ಹೇರಲಾಗಿದೆ.ಮುಂದಿನ ಸೂಚನೆ ಬರುವವರೆಗೂ ವಿಶೇಷ ಪಾಸ್‌ಗಳನ್ನು ನೀಡದಿರಲು ಮಂಡಳಿ ನಿರ್ಧರಿಸಿದೆ ಎಂದು ಪ್ರಕಟಣೆ ತಿಳಿಸಿದೆ.