ಬೆಂಗಳೂರು : ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಈಗ ಅವರು ಇಂದು ಇಹಲೋಕಾ ತ್ಯಜಿಸಿದ್ದಾರೆ.
ವಕ್ಫ್ ಬೋರ್ಡ್ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ, ಕೆಲ ತಿಂಗಳ ಹಿಂದೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಇಬ್ಬರೂ ಇರುವ ವೇದಿಕೆಯಲ್ಲಿ, “ಸಿದ್ದರಾಮಯ್ಯ ಅವರು ಮನಸ್ಸು ಮಾಡಿದ್ರೆ ಡಿ ಕೆ ಶಿವಕುಮಾರ್ ಅವರು ಸಿಎಂ ಆಗ್ತಾರೆ. ಸಿಎಂ ಕುರ್ಚಿ ಬಿಟ್ಟುಕೊಡಬೇಕು” ಎಂಬ ಹೇಳಿಕೆ ನೀಡಿ ಮುಜುಗರ ಉಂಟು ಮಾಡಿದ್ದರು.