ತನ್ನ ಜಲಪ್ರದೇಶದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಎಂಟು ಭಾರತೀಯ ಮೀನುಗಾರರನ್ನು ಬಂಧಿಸಿದ್ದಾಗಿ ಶ್ರೀಲಂಕಾ ಜಲಸೇನೆ ಭಾನುವಾರ ತಿಳಿಸಿದೆ. ಶ್ರೀಲಂಕಾ ಜಲಸೇನೆ ಭಾರತೀಯ ಮೀನುಗಾರರನ್ನು ಬಂಧಿಸಿದ್ದಲ್ಲದೆ, ಅವರಿಂದ ಎರಡು ದೋಣಿಗಳನ್ನು ಜಪ್ತಿ ಮಾಡಿದ್ದಾಗಿ ಮಾಹಿತಿ ನೀಡಿದೆ.
ಮನ್ನಾರ್‌ನ ಉತ್ತರ ಭಾಗದಲ್ಲಿ ಶನಿವಾರ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಬಂಧಿಸಲಾಗಿದೆ ಎಂದು ಜಲಸೇನೆಯ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ. ಇದರೊಂದಿಗೆ ಒಟ್ಟು 18 ಭಾರತೀಯ ಮೀನುಗಾರರನ್ನು ಬಂಧಿಸಿದಂತಾಗಿದೆ. ಜಪ್ತಿ ಮಾಡಿದ ದೋಣಿಗಳ ಸಂಖ್ಯೆ 3ಕ್ಕೆ ಏರಿಕೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.