ದಾವಣಗೆರೆ : ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಫೆಬ್ರವರಿ 13 ರಿಂದ 15 ರವರೆಗೆ ನಡೆಯುವ ಸಂತ ಸೇವಾಲಾಲ್ ಜಯಂತಿಯ ಪೂರ್ವಭಾವಿ ಸಭೆ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಅವರ ನೇತೃತ್ವದಲ್ಲಿ ನಡೆಯಿತು.
ಶ್ರೀ ಸಂತ ಸೇವಾಲಾಲ್ ಜಯಂತಿ ರಾಜ್ಯ ಮಟ್ಟದ ಜಯಂತಿ ಯಾಗಿದ್ದು ಇಲ್ಲಿಗೆ ಲಕ್ಷಾಂತರ ಜನ ಭಕ್ತರು, ಮಾಲಾಧಾರಿಗಳು ಆಗಮಿಸುವುದರಿಂದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕಾಗಿದೆ. ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ, ಊಟ, ವಸತಿ ಕಲ್ಪಿಸಿಕೊಡುವ ಜೊತೆಗೆ, ಶೌಚಲಯಗಳ ನಿರ್ವಹಣೆ ಮತ್ತು ಹೆಚ್ಚುವರಿ ಶೌಚಾಲಯಗಳ ನಿರ್ಮಾಣ ಮಾಡಬೇಕಾಗಿದೆ. ಬೆಳಕಿಗೆ ವಿದ್ಯುತ್ ದೀಪಾಲಂಕಾರ, ವಾಹನÀ ನಿಲುಗಡೆ ಸೂಕ್ತ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮಾಡಬೇಕಾಗಿದೆ ಎಂದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ ಎಂ ಮಾತಾನಾಡಿ ಜಿಲ್ಲಾಡಳಿತ ವತಿಯಿಂದ ಜಾತ್ರಾ ಸಂದರ್ಭದಲ್ಲಿ ಸುಗಮ ವ್ಯವಸ್ಥೆಗಾಗಿ ಸ್ವಯಂ ಸೇವಕರನ್ನು ಸಿದ್ದಪಡಿಸುತ್ತೆವೆ. ಮತ್ತು ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಜಯಂತಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಎಲ್ಲಾ ಸಿದ್ದತೆಗಳನ್ನು ಆಯಾ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಜಯಂತಿಯನ್ನು ಅಚ್ಚುಕಟ್ಟಾಗಿ ನಡೆಸಲು ಬೇಕಾದ ಎಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಶಾಸಕರಾದ ಬಸವರಾಜ್ ವಿ.ಶಿವಗಂಗಾ, ತಾಂಡ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಯದೇವನಾಯ್ಕ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.