ಮುಂಬರುವ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ SSLC ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಗ್ರೇಸ್ ಮಾರ್ಕ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಿಎಂ, ಡಿಸಿಎಂ ಭಾಗವಹಿಸಿದ್ದರು. ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಯಾವ ಉದ್ದೇಶ ಹಾಗೂ ಕಾರಣಕ್ಕೆ 20 ಕೃಪಾಂಕ ನೀಡಿದ್ದೀರಿ? ಈ ಅಂಕಗಳನ್ನು ನೀಡಲು ನಿಮಗೆ ಹೇಳಿದ್ದು ಯಾರು? ಅವರ ಸಾಮರ್ಥ್ಯದ ಆಧಾರದ ಮೇಲೆ ಅಂಕಗಳನ್ನ ಸಾಧಿಸಬೇಕು ಹೀಗೆ ಮಾಡುವುದರಿಂದ ಸ್ಪರ್ಧಾ ಸಾಮರ್ಥ್ಯ ಕಡಿಮೆಯಾಗುತ್ತದೆ ಎಂದರು.